ಕನ್ನಡದ ಹೆಸರಾಂತ ನಟ ದುನಿಯಾ ವಿಜಯ್ ಜನವರಿ 20ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳ ಜೊತೆ ಇರುವುದಕ್ಕಾಗಿಯೇ ಅವರು ವಿಶೇಷ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಜೊತೆಗೆ ವಿಜಯ್ ಅವರೇ ನಿರ್ದೇಶಿಸಿ, ನಟಿಸುತ್ತಿರುವ ಭೀಮ ಚಿತ್ರದ ಟೀಸರ್ ಕೂಡ ಅಂದು ಬಿಡುಗಡೆ ಆಗಲಿದೆ.
ಈ ಹುಟ್ಟು ಹಬ್ಬದ ಸಂದರ್ಭದಲ್ಲಿ ದುನಿಯಾ ವಿಜಯ್ (Duniya Vijay) ಅವರು ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಯಶ್ (Yash) ಫ್ಯಾನ್ಸ್ ದುರಂತ ಸಾವಿನ ಬಳಿಕ ವಿಜಯ್ ಅಭಿಮಾನಿಗಳಿಗೆ ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬದ (Birthday) ಅಪ್‌ಡೇಟ್ ಹಂಚಿಕೊಂಡಿದ್ದಾರೆ.
ಇದೇ ಜನವರಿ 20ರಂದು ದುನಿಯಾ ವಿಜಯ್ (Duniya Vijay) ಹುಟ್ಟುಹಬ್ಬವಿದೆ. ಹೀಗಾಗಿ ಪ್ರತಿ ಬಾರಿಯಂತೆ ಈ ಬಾರಿಯೂ ವಿಜಯ್ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.
ಕುಂಬಾರನಹಳ್ಳಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಅಲ್ಲಿಯೇ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ನಟ ಯಶ್ ಬರ್ತಡೇ ದಿನ ನಡೆದ ದುರಂತಗಳನ್ನು ಗಮನದಲ್ಲಿಟ್ಟುಕೊಂಡು ಈ ವಿಚಾರ ತಿಳಿಸಿದ್ದಾರೆ. ಇನ್ನೂ ಕಳೆದ ಬಾರಿ ಅಭಿಮಾನಿಯೊಬ್ಬರು ನಡೆದುಕೊಂಡೇ ವಿಜಯ್ ಹುಟ್ಟುಹಬ್ಬಕ್ಕೆ ಬಂದಿದ್ದರು. ಹಾಗಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಯಾವ ಅಭಿಮಾನಿಗಳು ಸಹ ಈ ಬಾರಿ ನಡೆದುಕೊಂಡು ಬರಬೇಡಿ, ಯಾರು ಕೇಕ್ ಮತ್ತು ಹೂವಿನ ಹಾರ ತರಬೇಡಿ. ನನಗೆ ನಿಮ್ಮ ಜೊತೆಗೆ ಕುಳಿತು ಪ್ರೀತಿಯಿಂದ ಊಟ ಮಾಡುವ ಆಸೆಯಿದೆ ಎಂದು ಹೇಳಿದ್ದಾರೆ.
ಜನವರಿ 20ರಂದು ಬೆಳಿಗ್ಗೆ ಎಲ್ಲರೂ ಸೇಫಾಗಿ ಬನ್ನಿ. ಜನವರಿ 19ರವರೆಗೂ ನಮಗೆ ಸಿನಿಮಾ ಕೆಲಸ ಇದೆ. ಹೀಗಾಗಿ ಜ.20ರಂದು ಎಲ್ಲರೂ ಬನ್ನಿ ಜೊತೆಯಲ್ಲಿ ಕುಳಿತು ಊಟ ಮಾಡೋಣ. ಯಾರು ನನ್ನ ಹುಟ್ಟುಹಬ್ಬದ ದಿನ ಫ್ಲೆಕ್ಸ್ ಬ್ಯಾನರ್ ಹಾಕಬೇಡಿ ಎಂದು ದುನಿಯಾ ವಿಜಯ್ ಹೇಳಿದ್ದಾರೆ.