ಉಡುಪಿ/ಮಂಗಳೂರು: ಬಿಜೆಪಿ ಹಿರಿಯ ಮುಖಂಡರಾದ ಎ.ಜಿ.ಕೊಡ್ಗಿ (93) ನಿಧನರಾಗಿದ್ದಾರೆ.
ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಇಂದು ಅವರು ನಿಧನ ಹೊಂದಿದ್ದಾರೆ. ಎಜಿ. ಕೊಡ್ಗಿ ಅವರು ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಬೈಂದೂರು ಶಾಸಕರಾಗಿ ಆಯ್ಕೆಯಾಗಿದ್ದರು. 1993 ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಬಿಜೆಪಿ ಆಡಳಿತದಲ್ಲಿ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಪ್ರಗತಿಪರ ಕೃಷಿ, ಸೌರ ವಿದ್ಯುತ್, ಗ್ರಾಮೀಣಾಭಿವೃದ್ಧಿ ನದಿ ಜೋಡಣೆ ಇವರ ಆಸಕ್ತಿಯ ಕ್ಷೇತ್ರಗಳಾಗಿದ್ದವು.
Advertisement
Advertisement
ಅಮಾಸೆಬೈಲಿನ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದರು. ಅಮಾಸೆಬೈಲು ಸೋಲಾರ್ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ದೇವರಾಜ ಅರಸು ಕಾಲದಲ್ಲಿ ಭೂಮಸೂದೆ ಕಾನೂನು ಅನುಷ್ಠಾನದಲ್ಲಿ ಮುಂಚೂಣಿಯಲ್ಲಿದ್ದರು. 2013ರಲ್ಲಿ ರಾಜಕೀಯ ನಿವೃತ್ತಿ ಹೊಂದಿ ಸಂಪೂರ್ಣ ಗ್ರಾಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಇದನ್ನೂ ಓದಿ: ಪಕ್ಷಿಗಳಿಗೆ ಆಹಾರವಿಡುವ ಟ್ರೇ ಹೊಂದಿದ್ದಕ್ಕೆ 3 ವಾರದಲ್ಲಿ 3 ಬಾರಿ ವ್ಯಕ್ತಿ ಅರೆಸ್ಟ್
Advertisement
ಕರ್ನಾಟಕ ಕರಾವಳಿ ಭಾಗದ ನಮ್ಮ ಪಕ್ಷದ ಹಿರಿಯ ನಾಯಕರು, ಮಾಜಿ ಶಾಸಕರು, ರಾಜ್ಯ ಮೂರನೇಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷರಾದ ಶ್ರೀ ಎ.ಜಿ. ಕೊಡ್ಗಿ ಅವರು ನಿಧನರಾದ ಸುದ್ದಿ ತಿಳಿದು ತುಂಬಾ ದುಃಖಿತನಾಗಿದ್ದೇನೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ pic.twitter.com/7DpLjkmK4y
— Basavaraj S Bommai (@BSBommai) June 13, 2022
Advertisement
ಸಿಎಂ ಸಂತಾಪ: ಕರ್ನಾಟಕ ಕರಾವಳಿ ಭಾಗದ ನಮ್ಮ ಪಕ್ಷದ ಹಿರಿಯ ನಾಯಕರು, ಮಾಜಿ ಶಾಸಕರು, ರಾಜ್ಯ ಮೂರನೇಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷರಾದ ಶ್ರೀ ಎ.ಜಿ. ಕೊಡ್ಗಿ ಅವರು ನಿಧನರಾದ ಸುದ್ದಿ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಳ್ಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಕಟೀಲ್ ಸಂತಾಪ: ಹಿರಿಯ ರಾಜಕಾರಣಿ ಎ.ಜಿ. ಕೊಡ್ಗಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎ.ಜಿ. ಕೊಡ್ಗಿ ಅವರು ಕರಾವಳಿಯ ರಾಜಕೀಯ ರಂಗದ ಭೀಷ್ಮನಾಗಿ ಕಾರ್ಯ ನಿರ್ವಹಿಸಿದ್ದರು. ಸಹಕಾರ ರಂಗ, ಕೃಷಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದ್ದರು ಎಂದು ಅವರು ತಿಳಿಸಿದ್ದಾರೆ. ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು 8 ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್: ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ವಿರುದ್ಧ ಕಾನೂನು ಕ್ರಮ : ಗೃಹ ಸಚಿವ ಆರಗ ಜ್ಞಾನೇಂದ್ರ
ಭಾಜಪಾ ಹಿರಿಯ ಮುಖಂಡರೂ, ಮಾಜಿ ಶಾಸಕರೂ, ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿದ್ದ ಶ್ರೀ ಎ.ಜಿ.ಕೊಡ್ಗಿ ಅವರ ಅಗಲುವಿಕೆ ತುಂಬಾ ಬೇಸರ ತಂದಿದೆ.
ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬಕ್ಕೆ, ಹಿತೈಷಿಗಳಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥನೆ. pic.twitter.com/Fzu4Yu2chM
— Nalinkumar Kateel (@nalinkateel) June 13, 2022
ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಛಾಪನ್ನು ಮೂಡಿಸಿದ್ದ ಅವರು ಕೊಡ್ಗಿ, ಶಂಕರನಾರಾಯಣ ಸಿಎ ಬ್ಯಾಂಕ್ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಮಂಗಳೂರು ಎಪಿಎಂಸಿ ಅಧ್ಯಕ್ಷ ಅಲ್ಲದೆ ರಾಜ್ಯ ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. 1982-1990ರ ತನಕ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅವರ ನಿಧನದಿಂದ ಪಕ್ಷ ಹಾಗೂ ಸಮಾಜ ಒಬ್ಬ ಮಾರ್ಗದರ್ಶಕ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.