ಭೀಮಾ ನದಿ ಪ್ರವಾಹ ಆತಂಕ – ನದಿ ತೀರಕ್ಕೆ ತೆರಳದಂತೆ ಡಿಸಿ ರಾಗಪ್ರಿಯಾ ಸೂಚನೆ

Public TV
1 Min Read
YGR DC RAGAPRIYA

ಯಾದಗಿರಿ: ಮುಂದಿನ ವಾರದಿಂದ ಅಕ್ಟೋಬರ್ ಎರಡನೇ ವಾರದ ವರೆಗೆ ಭೀಮಾ ನದಿಯ ನೀರಿನ ಪ್ರಮಾಣ ಜಾಸ್ತಿಯಾಗುವ ಸಂಭವಿದ್ದು, ಮತ್ತೆ ಭೀಮಾ ನದಿ ಪ್ರವಾಹ ಆತಂಕ ಶುರುವಾಗಿದೆ. ನದಿ ತೀರಕ್ಕೆ ಸಾರ್ವಜನಿಕರು ತೆರಳದಂತೆ ಮತ್ತು ಮೀನುಗಾರಿಕೆ ಮಾಡದಂತೆ ಯಾದಗಿರಿ ಡಿಸಿ ರಾಗಪ್ರಿಯಾ ಸೂಚನೆ ನೀಡಿದ್ದಾರೆ.

ygr basavasagar dam 3

ಈ ಬಗ್ಗೆ ಪಬ್ಲಿಕ್ ಟಿವಿಯ ಮುಖಾಂತರ ಜಿಲ್ಲೆಯ ಜನತೆ ಡಿಸಿ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಭೀಮಾ ನದಿಗೆ ಸದ್ಯ ಒಂದು ಲಕ್ಷ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ, 3 ರಿಂದ 4 ಲಕ್ಷ ನೀರು ಬಂದರೆ ತೊಂದರೆಯಾಗುತ್ತದೆ. ಈಗಾಗಲೇ ಸಂಬಂಧಪಟ್ಟ ತಹಶೀಲ್ದಾರರ ಸಭೆ ನಡೆಸಲಾಗಿದೆ. ನದಿ ತೀರದ ಗ್ರಾಮಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭೀಮಾ ನದಿ ತೀರದ ಜನರು ಜಿಲ್ಲಾಡಳಿತಕ್ಕೆ ಸಹಕಾರ ನೀಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಕೊಚ್ಚಿಹೋದ ಸೇತುವೆಗೆ ಡಿಸಿ, ಎಸ್ಪಿ ಭೇಟಿ, ಶೀಘ್ರ ದುರಸ್ತಿಗೆ ಆದೇಶ

YGR RAIN

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದೆ, ನಾಯ್ಕಲ್ ಸೇರಿದಂತೆ ಹಲವಾರು ಗ್ರಾಮದ ಮನೆಗಳಿಗೆ ಹಾನಿಯಾಗಿದೆ, ಯಡ್ಡಳ್ಳಿ ಸೇತುವೆ ಕೊಚ್ಚಿ ಹೋಗಿದೆ, ಈ ಬಗ್ಗೆ ಶೀಘ್ರ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಕಾಳಜೀ ಕೇಂದ್ರಗಳನ್ನು ಓಪನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಿಂದೂ ದೇವಸ್ಥಾನ ಟಾರ್ಗೆಟ್ ಮಾಡಿ ಧ್ವಂಸ ಮಾಡಲಾಗುತ್ತಿದೆ: ಪ್ರತಾಪ್ ಸಿಂಹ

Share This Article
Leave a Comment

Leave a Reply

Your email address will not be published. Required fields are marked *