ಮಡಿಕೇರಿ: ಕುವೆಂಪು ಸಾಕಷ್ಟು ಜನರ ಸಹಕಾರದಿಂದ ಉನ್ನತ ಸ್ಥಾನಕ್ಕೇರಿದರು ಎಂದು ಪಠ್ಯದಲ್ಲಿ ಸೇರಿಸಿದವನೊಬ್ಬ ಮೂರ್ಖ ಹಾಗೂ ಅಯೋಗ್ಯ ಎಂದು ಎಂಎಲ್‍ಸಿ ಭೋಜೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ಕೊಡಗಿನ ಸೋಮವಾರಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುವೆಂಪು ಸರ್ವ ಜನಾಂಗದ ಶಾಂತಿಯನ್ನು ಸಾರಿದವರು. ಅವರು ಈ ನಾಡಿನ ಆಸ್ತಿ ಆಗಿದ್ದಾರೆ. ಪಠ್ಯ ಪರಿಷ್ಕರಣೆ ಸಂದರ್ಭ ಅವರ ಬಗ್ಗೆ ಇನ್ನಷ್ಟು ಹೆಚ್ಚು ಮಾಹಿತಿ ಸಂಗ್ರಹಿಸಿ ಕೊಡಬೇಕಾಗಿತ್ತು ಎಂದು ಅಭಿಪ್ರಾಯಪಟ್ಟರು.
Advertisement
Advertisement
ಪಠ್ಯ ಪರಿಷ್ಕರಣೆಗೂ ಮುನ್ನ ಸರ್ಕಾರಕ್ಕೆ ಅವನ ಹಿನ್ನೆಲೆ ಗೊತ್ತಿರಲಿಲ್ಲವೇ.? ಎಲ್ಲರೂ ಹೇಳಿದ ಮೇಲೆ ಪಠ್ಯಪುಸ್ತಕ ಸಮಿತಿ ವಿಸರ್ಜನೆ ಮಾಡಿದ ಸರ್ಕಾರಕ್ಕೆ ನಾಚಿಕೆ ಆಗಬೇಕು. ಆದರೆ ಇಷ್ಟೆಲ್ಲಾ ಅಯೋಗ್ಯ ಕೆಲಸ ಮಾಡಿದ್ದಾನೆಂದು ಹೇಳಿದ ಮೇಲೆ ಸಮಿತಿ ವಿಸರ್ಜನೆ ಮಾಡಿದ ನಿಮಗೆ ನಾಚಿಕೆ ಆಗಬೇಕು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಜೆಡಿಎಸ್‍ನಿಂದ ಶಾಸಕ ಗುಬ್ಬಿ ಶ್ರೀನಿವಾಸ್, ಶ್ರೀನಿವಾಸ್ ಗೌಡ ಉಚ್ಚಾಟನೆ
Advertisement
Advertisement
ರೋಹಿತ್ ಚಕ್ರತಿರ್ಥನನ್ನು ಸಮಿತಿ ಸದಸ್ಯನನ್ನಾಗಿಯೂ ಮಾಡಬೇಕಾಗಿರಲಿಲ್ಲ. ಆದರೂ ಅಧ್ಯಕ್ಷನನ್ನಾಗಿ ಮಾಡಲಾಯಿತು. ಇಂತಹ ಅಯೋಗ್ಯನನ್ನು ಇಡೀ ಸಮಾಜದಿಂದ ದೂರ ಇಡಬೇಕು. ಸಮಾಜದಲ್ಲಿ ಸಾಮರಸ್ಯ ಹಾಳು ಮಾಡಲು ಯತ್ನಿಸಿದ ಅವನ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳಬೇಕೆಂದು ಎಂದು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಶೀಘ್ರವೇ ಸಿಡಿಎಸ್ ನೇಮಕ: ರಾಜನಾಥ್ ಸಿಂಗ್ ಮಾಹಿತಿ