ಭೋಪಾಲ್: ಕಾಂಗ್ರೆಸ್ (Congress) ಶಾಸಕರ (MLA) ಅಧಿಕೃತ ಬಂಗಲೆಯಲ್ಲಿ (Bungalow) ಕಾಲೇಜು ವಿದ್ಯಾರ್ಥಿಯೊಬ್ಬ (Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭೋಪಾಲ್‌ನಲ್ಲಿ (Bhopal) ನಡೆದಿದೆ.
ತಿರತ್ ಸಿಂಗ್ ಮೃತ ವಿದ್ಯಾರ್ಥಿ. ಈತ ಕಳೆದ 4 ವರ್ಷಗಳಿಂದ ಶಾಸಕ ಓಂಕಾರ್ ಸಿಂಗ್ ಬಂಗಲೆಯಲ್ಲಿ ವಾಸವಿದ್ದ. ಆದರೆ ತಿರತ್ ಸಿಂಗ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ. ಈ ಹಿನ್ನೆಲೆಯಲ್ಲಿ ತಿರತ್ ಸಿಂಗ್ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ.
Advertisement
Advertisement
ಘಟನೆಗೆ ಸಂಬಂಧಿಸಿ ತಿರತ್ ಸಿಂಗ್ ಡೆತ್ ನೋಟ್ ಬರೆದಿಟ್ಟಿದ್ದು, ಇದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಈ ಡೆತ್‌ನೋಟ್‌ನ್ನು ಕೈಬರಹ ತಜ್ಞರಿಗೆ ಕಳುಹಿಸಿದ್ದಾರೆ. ಈ ಬಗ್ಗೆ ಶ್ಯಾಮಲಾ ಹಿಲ್ಸ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮಾತನಾಡಿ, ಪ್ರೊಫೆಸರ್ ಕಾಲೋನಿಯಲ್ಲಿರುವ ದಿಡೋರಿ ಶಾಸಕ ಓಂಕಾರ್ ಸಿಂಗ್ ಮರ್ಕಮ್ ಅವರ ಅಧಿಕೃತ ನಿವಾಸದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಅಲ್ಲಿಯೇ ಡೆತ್ ನೋಟ್ ಪತ್ತೆಯಾಗಿದೆ. ವಿದ್ಯಾರ್ಥಿಯ ಸಾವಿಗೆ ಕಾರಣವಾಗಬಹುದಾದ ಎಲ್ಲಾ ಆಯಾಮಗಳ ಬಗ್ಗೆ ತನಿಖೆ ಆರಂಭಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಸಾಕಿದ್ದ ಊಟ ತಿಂದು 10 ಕುರಿ ಸಾವು – 70 ಕುರಿಗಳು ಅಸ್ವಸ್ಥ
Advertisement
Advertisement
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತಿರತ್ ಜತೆ ಸರ್ಕಾರಿ ಬಂಗಲೆಯಲ್ಲಿ ವಾಸವಿದ್ದ ವ್ಯಕ್ತಿಯೊಂದಿಗೆ ಮಾತನಾಡಿದ್ದೇವೆ. ಮೃತ ವಿದ್ಯಾರ್ಥಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಭೋಪಾಲ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂದು ತಿಳಿದು ಬಂದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಿರತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಡೆತ್ ನೋಟ್ ಹಾಗೂ ಕುಟುಂಬದವರ ಹೇಳಿಕೆಯಿಂದ ಸ್ಪಷ್ಟವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಾಲ ವಂಚನೆ ಪ್ರಕರಣ – ವೀಡಿಯೋಕಾನ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಬಂಧನ