– ಅರಣ್ಯದಲ್ಲಿ ರಕ್ತದ ಮಡುವಿನಲ್ಲಿ ಬಾಲಕಿ ಪತ್ತೆ
– ಓರ್ವ ಶಂಕಿತ ಆರೋಪಿ ಪೊಲೀಸರ ವಶಕ್ಕೆ
ಭೋಪಾಲ್: ಕೊರೊನಾ ವೈರಸ್ ಹಾವಳಿಗೆ ಹೆದರಿ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದೆ. ಆದರೆ ಲಾಕ್‍ಡೌನ್ ಜಾರಿಯಲ್ಲಿದ್ದರೂ ಕಾಮುಕರ ಅಟ್ಟಹಾಸ ಮಾತ್ರ ಕಡಿಮೆ ಆಗಿಲ್ಲ. ಮಧ್ಯಪ್ರದೇಶದಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು, ಆಕೆಯ ಕಣ್ಣುಗಳಿಗೆ ಚಾಕುವಿನಿಂದ ಇರಿದ ನೀಚ ಕೃತ್ಯವೊಂದು ಬೆಳಕಿಗೆ ಬಂದಿದೆ.
ಬುಧವಾರ ಈ ಘಟನೆ ನಡೆದಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 7 ವರ್ಷದ ಬಾಲಕಿಯನ್ನು ಅಪಹರಿಸಿ, ಪಾಳುಬಿದ್ದ ಮನೆಗೆ ಆಕೆಯನ್ನು ಎಳೆದೊಯ್ದು, ಕೈಗಳನ್ನು ಹಗ್ಗದಿಂದ ಕಟ್ಟಿ ಅತ್ಯಾಚಾರ ಎಸೆಗಲಾಗಿದೆ. ಬಳಿಕ ಆಕೆಯ ಕಣ್ಣುಗಳನ್ನು ಚಾಕುವಿನಿಂದ ಇರಿದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಅರಣ್ಯದ ಮದ್ಯೆ ಅತ್ಯಾಚಾರಿ ಎಸೆದು ಹೋಗಿದ್ದಾನೆ.
Advertisement
Advertisement
ಬಾಲಕಿಯನ್ನು ಹುಡುಕಾಡುತ್ತಿದ್ದಾಗ ಅರಣ್ಯದಲ್ಲಿ ರಕ್ತದ ಮಡುವಿನಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ತಕ್ಷಣ ಆಕೆಯನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ಜಬಲ್‍ಪುರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.
Advertisement
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಗುರುವಾರ ಶಂಕಿತನೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಆದಷ್ಟು ಬೇಗ ಆರೋಪಿಯನ್ನು ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Advertisement
ಈ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಟ್ವೀಟ್ ಮಾಡಿ ಘಟನೆಯನ್ನು ಖಂಡಿಸಿದ್ದಾರೆ. ಈ ಪ್ರಕರಣ ಆರೋಪಿಯನ್ನು ಆದಷ್ಟು ಬೇಗ ಬಂಧಿಸಿ ಎಂದು ಪೊಲೀಸರಿಗೆ ಹೇಳಿದ್ದಾರೆ. ಪುಟ್ಟ ಬಾಲಕಿ ಮೇಲೆ ನೀಚ ಕೃತ್ಯವೆಸೆಗಿರುವವನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
ಈ ಅತ್ಯಾಚಾರದ ಬಗ್ಗೆ ತಿಳಿದ ಮಧ್ಯಪ್ರದೇಶ ಮಾಜಿ ಸಿಎಂ ಕಮಲ್‍ನಾಥ್ ಕೂಡ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಏನು ನಡೆಯುತ್ತಿದೆ? ಲಾಕ್‍ಡೌನ್ ಅಲ್ಲೂ ಇಂತಹ ಕೃತ್ಯಗಳು ನಡೆಯುತ್ತಿದೆ ಎಂದರೆ ಏನರ್ಥ? ಅಗತ್ಯ ವಸ್ತುಗಳನ್ನು ಕೂಡ ಖರೀದಿಸಲು ಜನ ಸಾಮಾನ್ಯರು ಹೊರಗೆ ಬಾರದಿರುವ ಹಾಗೆ ಲಾಕ್‍ಡೌನ್ ಹೇರಿದ್ದರೂ ಅತ್ಯಾಚಾರ ನಡೆದಿದೆ ಎಂದು ಕಿಡಿಕಾರಿದ್ದಾರೆ.
ಇತ್ತ ದಮೋಹ್ ಎಸ್‍ಪಿ ಈ ಪ್ರಕರಣದ ಆರೋಪಿಯನ್ನು ಪತ್ತೆಹಚ್ಚಲು ಸಹಕರಿಸಿದರೆ 10 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.