ಭೋಪಾಲ್: ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ವಿರುದ್ಧ ಕೇಸ್ ದಾಖಲಾಗಿದೆ.
ಸಹಾಯಕ ಪೊಲೀಸ್ ಕಮೀಷನರ್ ನಿಧಿ ಸಕ್ಸೇನಾ ಪ್ರಕಾರ, ಮಂಗಳವಾರ ರಾತ್ರಿ ಐಎಎಸ್ ಅಧಿಕಾರಿ ಬುಂಡಾಸ್ ವಿರುದ್ಧ ಅವನ ಪತ್ನಿ ದೂರು ದಾಖಲಿಸಿದ್ದು, ಪ್ರಾಥಮಿಕ ತನಿಖೆಗಳ ನಂತರ ಎಫ್‍ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಾಧ್ಯಾಪಕ ಅಮಾನತು
Advertisement
Advertisement
ವಿವಿಧ ಸಂಬಂಧಿತ ಸೆಕ್ಷನ್‍ಗಳಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದೇವೆ. ಇದಲ್ಲದೆ ನಾವು ತನಿಖೆಯನ್ನು ಮುಂದುವರಿಸಿದಾಗ ಕಾರ್ಯವಿಧಾನದ ಪ್ರಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
Advertisement
ಬುಂಡಾಸ್ 2011 ಕೇಡರ್ ಎಂಪಿ ಬ್ಯಾಚ್ ಅಧಿಕಾರಿಯಾಗಿದ್ದು, ಪ್ರಸ್ತುತ ಅರಣ್ಯ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾನೆ. ಇದಕ್ಕೂ ಮೊದಲು ಅವನು ಛತ್ತರ್‍ಪುರ ಸೇರಿದಂತೆ ಹಲವು ಜಿಲ್ಲೆಗಳ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದನು. ಅಲ್ಲಿ ಅವನು ಕೆಲವು ವಿವಾದಗಳನ್ನು ಎದುರಿಸುತ್ತಿದ್ದನು. ಹಾಗಾಗಿ ವಿವಿಧ ರಾಜಕೀಯ ಪಕ್ಷಗಳ ಸಾರ್ವಜನಿಕ ಪ್ರತಿನಿಧಿಗಳು ಅವನನ್ನು ತೆಗೆದುಹಾಕಲು ಒತ್ತಾಯಿಸಿದ್ದರು.ಇದನ್ನೂ ಓದಿ: ಆ್ಯಸಿಡ್ ಎರಚಿದ ಕಿರಾತಕನಿಗೆ ಲುಕ್‍ಔಟ್ ನೊಟೀಸ್ ಜಾರಿ
Advertisement
ಆರೋಪಿಯು ಭೋಪಾಲ್‍ನಲ್ಲಿ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿಯೂ ಸೇವೆ ಸಲ್ಲಿಸಿದ್ದನು. ಬುಂಡಾಸ್‍ನ ಪತ್ನಿ ಸ್ವತಃ ಐಆರ್‍ಎಸ್ ಅಧಿಕಾರಿಯಾಗಿದ್ದಾರೆ.