ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ ಕಾಂಗ್ರೆಸ್ (Congress) ಸರ್ಕಾರದ 60% ಕಮಿಷನ್ ದಂಧೆಗೆ ಸಾಕ್ಷಿ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ಹೊರಹಾಕಿದೆ.
ಭೋವಿ ನಿಗಮದ ಅಕ್ರಮದ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ (JDS), ಕೂಡಲೇ ಭೋವಿ ನಿಗಮದ ಅಧ್ಯಕ್ಷನ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: 232 ಕೋಟಿ ವಂಚನೆ ಪ್ರಕರಣ – ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್ ಅರೆಸ್ಟ್
ಎಕ್ಸ್ನಲ್ಲಿ ಏನಿದೆ?
60% ಕಾಂಗ್ರೆಸ್ ಸರ್ಕಾರದ ಕಮಿಷನ್ ದಂಧೆ ಮತ್ತೊಮ್ಮೆ ಸಾಬೀತಾಗಿದೆ. ಭೋವಿ ನಿಗಮದಲ್ಲಿ ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ರೂ. ಸಹಾಯಧನ ಬಿಡುಗಡೆ ಮಾಡಲು ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ 5 ಲಕ್ಷ ರೂ. ಕಮಿಷನ್ ಪಡೆಯುತ್ತಿದ್ದಾನೆ. ಇದನ್ನೂ ಓದಿ: ಬೆಂಗಳೂರು ಟು ಬಳ್ಳಾರಿ ಜೈಲು – ದರ್ಶನ್ ಭವಿಷ್ಯ ಇಂದು ಕೋರ್ಟ್‌ನಲ್ಲಿ ನಿರ್ಧಾರ
ರಾಜ್ಯ ಸರ್ಕಾರ ಕೂಡಲೇ ಭ್ರಷ್ಟ ಅಧ್ಯಕ್ಷನನ್ನು ವಜಾ ಮಾಡಿ, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಬೇಕು ಎಂದು ಜೆಡಿಎಸ್ ಪಕ್ಷವು ಆಗ್ರಹಿಸುತ್ತದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣ ನಡೆಸಿದ್ದ ಭ್ರಷ್ಟ ಸರ್ಕಾರ, ಬಳಿಕ ಎಸ್‌ಸಿಎಸ್‌ಪಿ/ಟಿಎಸ್‌ಪಿ ನಿಧಿಯಲ್ಲಿನ ಸಾವಿರಾರು ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿಕೊಂಡು ಪರಿಶಿಷ್ಟರಿಗೆ ದ್ರೋಹ ಬಗೆದಿದ್ದ ಕಾಂಗ್ರೆಸ್, ಮತ್ತೊಮ್ಮೆ ದಲಿತರ ಬೆನ್ನಿಗೆ ಚೂರಿ ಹಾಕಿದೆ. ದಲಿತ ವಿರೋಧಿ ಸಿದ್ದರಾಮಯ್ಯ (Siddaramaiah) ಸರ್ಕಾರದ ದುರಾಡಳಿತ ಮಿತಿಮೀರಿದೆ ಎಂದು ಜೆಡಿಎಸ್ ಕಿಡಿಕಾರಿದೆ.