ಬೆಂಗಳೂರು: ಭೋವಿ ನಿಗಮದ (Bhovi Development Corporation) ಅಕ್ರಮ ಕೇಸ್ ನಲ್ಲಿ ತನಿಖೆ ಎದುರಿಸಿದ್ದ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪದ್ಮನಾಭ ನಗರದಲ್ಲಿ ನಡೆದಿದೆ.
32 ವರ್ಷದ ಜೀವಾ ಫ್ಯಾನಿಗೆ ನೇಣು ಬಿಗಿದುಕೊಂಡು ಪದ್ಮನಾಭ ನಗರದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಇದನ್ನೂ ಓದಿ: ಅಡಿಕೆ ಮರದಲ್ಲಿ ಸಿಲುಕಿದೆ ಪೊಲೀಸರಿಂದ ಸಿಡಿದ ಗುಂಡು – ನಕ್ಸಲ್ ವಿರುದ್ಧ ಎಎನ್‌ಎಫ್ ಕಾರ್ಯಾಚರಣೆ ಹೇಗಿತ್ತು ಗೊತ್ತಾ?
ಜೀವಾ, ಭೋವಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ಕಳೆದ 3 ತಿಂಗಳ ಹಿಂದೆ ಒಮ್ಮೆ ವಿಚಾರಣೆ ಎದುರಿಸಿದ್ದರು. ಅಕ್ರಮದ ತನಿಖೆ ಮಾಡುತ್ತಿರುವ ಅಧಿಕಾರಿಗಳು ಜೀವಾಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿದ್ದರು. ಅಲ್ಲದೇ ಕಳೆದ ನಾಲ್ಕು ದಿನಗಳಿಂದ ಸತತವಾಗಿ ವಿಚಾರಣೆಗೆ ಹಾಜರಾಗಿದ್ದರು.
ಗುರುವಾರ (ನ.21) ವಿಚಾರಣೆ ಎದುರಿಸಿ ಬಂದ ನಂತರ, ಪ್ರಕರಣದ ತನಿಖಾಧಿಕಾರಿಗಳು ವಿಚಾರಣೆ ವೇಳೆ ನನಗೆ ಕಿರುಕುಳ ನೀಡಿದ್ದಾರೆಂದು ಆರೋಪಿಸಿ 11 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕ್ಷಮೆ ಕೇಳಿ, ಇಲ್ಲವೇ 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವೆ – ರಾಹುಲ್, ಖರ್ಗೆಗೆ ವಿನೋದ್ ತಾವ್ಡೆ ನೋಟಿಸ್
11 ಪುಟಗಳ ಡೆತ್ ನೋಟ್‌ನಲ್ಲಿ ಅಕ್ರಮದ ತನಿಖೆ ನಡೆಸುತ್ತಿರೋ ತನಿಖಾಧಿಕಾರಿ ಡಿವೈಎಸ್‌ಪಿ ಹೆಸರು ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಇನ್ನೂ ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಯಾರಾಗ್ತಾರೆ ಮಹಾರಾಷ್ಟ್ರ ಸಿಎಂ – ರಾತ್ರೋರಾತ್ರಿ ತಲೆ ಎತ್ತಿದೆ ಅಜಿತ್ ಪವಾರ್ ಪೋಸ್ಟರ್