ಅಹಮಾದಾಬಾದ್: ಗುಜರಾತ್‍ನ 17ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ದೇವರ ಹೆಸರಿನಲ್ಲಿ ಇಂದು ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಚನ ಆಚಾರ್ಯ ದೇವವ್ರತ್ ಪ್ರಮಾಣವಚನ ಬೋಧಿಸಿದರು.
Advertisement
ನಿರ್ಗಮಿತ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಶಾಸಕಾಂಗ ಸಭೆಯಲ್ಲಿ ಭೂಪೇಂದ್ರ ಪಟೇಲ್ ಹೆಸರನ್ನು ಆಯ್ಕೆ ಮಾಡಲಾಯಿತ್ತು. ಇಂದು ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ನರೇಂದ್ರ ಸಿಂಗ್ ತೋಮರ್, ಮನ್ಸೂಕ್ ಮಾಂಡವ್ಯ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್, ಹರಿಯಾಣ ಸಿಎಂ ಮನೋಹರಲಾಲ್ ಕಟ್ಟರ್ ಸೇರಿ ಗುಜರಾತ್ ಹಲವು ಪ್ರಮುಖ ನಾಯಕರು ಭಾಗಿಯಾಗಿದ್ದರು. ಇದನ್ನೂ ಓದಿ: ಭೂಪೇಂದ್ರ ಪಟೇಲ್ ಯಾರು? ಹಿನ್ನೆಲೆ ಏನು?
Advertisement
ಭೂಪೇಂದ್ರ ಪಟೇಲ್, ಸಿಎಂ ಹುದ್ದೆಗೆ ಆಯ್ಕೆಯಾದ ಅಚ್ಚರಿಯ ಹೆಸರಾಗಿದ್ದು, 2022 ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ಈ ಆಯ್ಕೆ ಮಾಡಿದೆ. ಗುಜರಾತ್‍ನಲ್ಲಿ ಬಹುಸಂಖ್ಯಾತರಾಗಿರುವ ಪಟೇಲ್ ಸಮುದಾಯವನ್ನು ತನ್ನೆಡೆಗೆ ಸೆಳೆಯಲು ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: ಶೇ.60-65 ಮತದಾನದ ನಡೆದರೆ ಪ್ರಿಯಾಂಕಾಗೆ ಗೆಲುವು: ಸುವೇಂದು
Advertisement
ಜೈನ್ ಸಮುದಾಯಕ್ಕೆ ಸೇರಿದ್ದ ವಿಜಯ್ ರೂಪಾನಿ ವಿರುದ್ಧ ಆಡಳಿತ ವೈಫಲ್ಯದ ಆರೋಪ ಕೇಳಿ ಬಂದಿತ್ತು. ಕೆಲವು ಶಾಸಕರು ವಿರೋಧವನ್ನು ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಚುನಾವಣಾ ದೃಷ್ಟಿಯಿಂದ ಮುಖ್ಯಮಂತ್ರಿ ಬದಲಾಯಿಸಲು ಹೈಕಮಾಂಡ್ ತೀರ್ಮಾನಿಸಿತ್ತು. ರೂಪಾನಿ ಜಾಗಕ್ಕೆ ಆನಂದಿಬೇನ್ ಪಟೇಲ್ ಆಪ್ತ ಮತ್ತು ಪಟೇಲ್ ಸಮುದಾಯದ ಕದ್ವ ಉಪಪಂಗಡಕ್ಕೆ ಸೇರಿದ್ದ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಯಿತ್ತು. ಈ ಮೂಲಕ ಪಟೇಲ್ ಸಮುದಾಯ ಮತ್ತು ಬಿಜೆಪಿಯಿಂದ ದೂರ ಸರಿಯುತ್ತಿರುವ ಕದ್ವ ಸಮುದಾಯ ಸೆಳೆಯಲು ಬಿಜೆಪಿ ಪ್ರಯತ್ನಿಸಿದೆ. ಇದನ್ನೂ ಓದಿ: ಮೋದಿ ಸರ್ಕಾರದಿಂದ ಲವ್ ಲೆಟರ್ ಬಂದಿದೆ – ಆಪ್ ನಾಯಕ
Advertisement
ಭೂಪೇಂದ್ರ ಪಟೇಲ್ 2017 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಘಾಟ್‍ಲೋಡಿಯಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಈ ಕ್ಷೇತ್ರವನ್ನು ಆನಂದಿ ಬೆನ್ ಪಟೇಲ್ ಮೊದಲು ಪ್ರತಿನಿಧಿಸಿದ್ದರು. ಕಳೆದ ಬಾರಿಯ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಶಶಿಕಾಂತ್ ಪಟೇಲ್ ವಿರುದ್ಧ ಸ್ಪರ್ಧಿಸಿದ್ದ ಭೂಪೇಂದ್ರ ಪಟೇಲ್ 1 ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದರು. ಭೂಪೇಂದ್ರ ಪಟೇಲ್ ಅವರು ಈ ಹಿಂದೆ ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ಪೆಟ್ರೋಲ್ ಸುರಿದು ಪತಿಯನ್ನು ಹತ್ಯೆಗೈದು ಚರಂಡಿಗೆ ಶವ ಎಸೆದ್ಳು
ಅಹಮದಾಬಾದ್‍ನ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ವ್ಯಾಸಂಗ ಮಾಡಿರುವ ಪಟೇಲ್ ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಪಡೆದಿದ್ದಾರೆ. 2017ರ ವಿಧಾನಸಭೆ ಚುನಾವಣೆ ಸಮಯದಲ್ಲಿ 5 ಕೋಟಿಗೂ ಅಧಿಕ ಆಸ್ತಿ ಹೊಂದಿರುವುದಾಗಿ ಪಟೇಲ್ ಘೋಷಿಸಿಕೊಂಡಿದ್ದರು.