Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ

Bollywood

ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ

Public TV
Last updated: March 26, 2026 11:41 am
Public TV
Share
2 Min Read
Bhushan Kumar Vivek Agnihotri 2
SHARE

ಭಾರತೀಯ ಸೇನೆಯ ಶೌರ್ಯ, ಸಾಹಸ ಕುರಿತಾದ ಅನೇಕ ಸಿನಿಮಾಗಳು ಈಗಾಗಲೇ ಬಾಲಿವುಡ್​ನಲ್ಲಿ (Bollywood) ಬಂದಿವೆ, ಈಗಲೂ ಬರುತ್ತಿವೆ. ಉರಿ: ದಿ ಸರ್ಜಿಲ್‌ ಸ್ಟ್ರೈಕ್‌, ಸ್ಕೈಫೋರ್ಸ್‌, ಫೈಟರ್‌, ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಇನ್ನೂ ಅನೇಕ ಸಿನಿಮಾಗಳು ಭಾರತೀಯ ಮೂರು ಸೇನೆಗಳ ಪರಾಕ್ರಮಕ್ಕೆ ಹಿಡಿದ ಕನ್ನಡಿಯಾಗಿವೆ. ಇದೀಗ ಪಹಲ್ಗಾಮ್ ದಾಳಿಗೆ (Pahalgam Attack) ಪ್ರತಿಯಾಗಿ ಭಾರತ ನಡೆದ ʻಆಪರೇಷನ್‌ ಸಿಂಧೂರʼ ವಿಶೇಷ ಕಾರ್ಯಾಚರಣೆ ಕುರಿತಾದ ಸಿನಿಮಾ ಸೆಟ್ಟೇರಲು ರೆಡಿಯಾಗಿದೆ.

‘ದಿ ಕಾಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’ ಮತ್ತು ‘ದಿ ಬೆಂಗಾಲ್ ಫೈಲ್ಸ್’ ನಂತಹ ಸಿನಿಮಾಗಳನ್ನ ಮಾಡಿರುವ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಸಿನಿ ನಿರ್ಮಾಪಕ ಭೂಷಣ್ ಕುಮಾರ್ ಗುರುವಾರ ತಮ್ಮ ಹೊಸ ಚಿತ್ರ ʻಆಪರೇಷನ್ ಸಿಂಧೂರ್‌ʼ (Operation Sindoor) ಅನ್ನು ಘೋಷಿಸಿದ್ದಾರೆ. ಇದನ್ನೂ ಓದಿ: ವಾಯುಪಡೆಯ ಶೌರ್ಯ-ಸಾಹಸಕ್ಕೆ ಕನ್ನಡಿ ಹಿಡಿದ ಸಿನಿಮಾಗಳನ್ನ ನೀವೂ ನೋಡಿ….

Operation Sindoor 1

ಲೆಫ್ಟಿನೆಂಟ್ ಜನರಲ್ ಕೆಜೆಎಸ್ ‘ಟೈನಿ’ ಧಿಲ್ಲೋನ್ ಅವರ ಪುಸ್ತಕ, ʻಆಪರೇಷನ್ ಸಿಂಧೂರ್: ದಿ ಅನ್‌ಟೋಲ್ಡ್ ಸ್ಟೋರಿ ಆಫ್ ಇಂಡಿಯಾಸ್ ಡೀಪ್ ಸ್ಟ್ರೈಕ್ಸ್ ಇನ್‌ಸೈಡ್ ಪಾಕಿಸ್ತಾನ್‌ʼ ಆಧರಿಸಿ ಈ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಈ ಬಗ್ಗೆ ಖುದ್ದು ವಿವೇಕ್‌ ಅಗ್ನಿಹೋತ್ರಿ ಅವ್ರೇ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಶೀಘ್ರದಲ್ಲೇ ಚಿತ್ರೀಕರಣದ ತಯಾರಿ ಶುರುವಾಗಲಿದ್ದು, ನೈಜ ಘಟನಾ ಸ್ಥಳಗಳಿಗೆ ನಿರ್ದೇಶಕರು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ವಿವೇಕ್‌ ಅಗ್ನಿಹೋತ್ರಿ (Vivek Agnihotri), ಸಿನಿಮಾವನ್ನು ಸಕಾಲಿಕ ಮತ್ತು ಮಹತ್ವದ್ದಾಗಿರಿಸಿಕೊಂಡು ಕಾರ್ಯಾಚರಣೆಯ ಆಳವನ್ನ ತೆರೆಯ ಮೇಲೆ ಇರುವುದು ನಮ್ಮ ಉದ್ದೇಶವಾಗಿದೆ. ಈ ಸಿನಿಮಾ 2025 ರ ಮೇ 6 ರಿಂದ ಮೇ 10 ರ ನಡುವಿನ ಘಟನೆಗಳನ್ನ ಆಧರಿಸಿದ್ದು, ಕಥೆಯನ್ನ ಪ್ರೇಕ್ಷಕರಿಗೆ ವಿಶ್ವಾಸಾರ್ಹತೆಯೊಂದಿಗೆ ಕಟ್ಟಿಕೊಡುವ ಪ್ರಯತ್ನ ಮಾಡುತ್ತೇವೆ. ಒಟ್ಟಾರೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಹೇಗೆ ನಡೆಯಿತು ಅನ್ನೋದನ್ನ ತೆರೆಯ ಮೇಲೆ ವಿವರಿಸಲಾಗುತ್ತದೆ ಎಂದು ಹೇಳಿದ್ದಾರೆ.

Bhushan Kumar Vivek Agnihotri

ನಿರ್ಮಾಪಕ ಭೂಷಣ್‌ ಕುಮಾರ್‌ (Bhushan Kumar) ಮಾತನಾಡಿ, ಇದನ್ನ ಸಿನಿಮಾ ಅಂತ ನೋಡೋದಕ್ಕಿಂತ ಮಹತ್ವದ ಕಾರ್ಯ ಅಂತಲೇ ಬಣ್ಣಿಸಬಹುದು. ಕೆಲವು ಕಥೆಗಳನ್ನ ನಾವು ಆಯ್ಕೆ ಮಾಡಲ್ಲ, ಅವು ನಿಮ್ಮನ್ನ ಆಯ್ಕೆ ಮಾಡುತ್ತವೆ ಎಂದು ವಿವೇಕ್‌ ಅಗ್ನಿಹೋತ್ರಿ ಅವರನ್ನ ಶ್ಲಾಘಿಸಿದ್ದಾರೆ.

ಆಪರೇಷನ್‌ ಸಿಂಧೂರ್‌ ಅಂತಹ ಒಂದು ಕಥೆ, ಅದ್ರಲ್ಲೂ ಒಂದು ರಾಷ್ಟ್ರ ಅಂತಹ ಘಟನೆಗಳನ್ನು ನೋಡಿದಾಗ, ಅವುಗಳನ್ನು ಸತ್ಯದರ್ಶನವಾಗಿ ದಾಖಲಿಸುವುದು ಮುಖ್ಯವಾಗುತ್ತದೆ ಎಂದಿದ್ದಾರೆ. ಆದ್ರೆ ಕಥೆಗೆ ಅಗತ್ಯ ಕಲಾವಿದರ ಆಯ್ಕೆ ಕುರಿತು ಎಲ್ಲಿಯೂ ಬಹಿರಂಗಪಡಿಸಿಲ್ಲ. ಇದನ್ನೂ ಓದಿ: ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ

Operation Sindoor

ಸಿಂಧೂರ ಪ್ರತೀಕಾರ; ಹಿನ್ನೆಲೆ ಏನು?
ಕಾಶ್ಮೀರದ ಪಹಲ್ಗಾಮ್‌ನ (Pahalgam) ಬೈಸರನ್‌ ಕಣಿವೆ ಪ್ರದೇಶದಲ್ಲಿ ಕಾಲ ಕಳೆಯುತ್ತಿದ್ದ ಪ್ರವಾಸಿಗರ ಮೇಲೆ ಏ.22 ರಂದು ಸೈನಿಕರ ಸೋಗಿನಲ್ಲಿ ಬಂದ ಉಗ್ರರು ಅಮಾಯಕರನ್ನ ಗುಂಡಿಟ್ಟು ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಬೇಕೆಂದೇ ಪಣ ತೊಟ್ಟಿದ್ದ ಭಾರತ ʻಆಪರೇಷನ್‌ ಸಿಂಧೂರʼ ಹೆಸರಿನಡಿ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರ (PoK) ಪ್ರದೇಶದಲ್ಲಿದ್ದ ಉಗ್ರ ನೆಲೆಗಳನ್ನ ಧ್ವಂಸ ಮಾಡಿತು. ಆದ್ರೂ ಮತ್ತೆ ಕಿತಾಪತಿ ಮಾಡಿದ್ದ ಪಾಕ್‌, ಭಾರತದ 15 ನಗರಗಳ ಮೇಲೆ ದಾಳಿ ನಡೆಸಲು ಹೊಂಚುಹಾಕಿತ್ತು. ಇದನ್ನರಿತ ಭಾರತ ಪಾಕ್‌ ದಾಳಿಯನ್ನ ವಿಫಲಗೊಳಿಸಿದ್ದಲ್ಲದೇ ಲಾಹೋರ್‌ನಲ್ಲಿನ (Lahore) ರೆಡಾರ್‌ ಕೇಂದ್ರವನ್ನೇ ಛಿದ್ರ ಛಿದ್ರ ಮಾಡಿತು. ʻಆಪರೇಷನ್‌ ಸಿಂಧೂರʼ ಕಾರ್ಯಾಚರಣೆ ಶುರು ಮಾಡಿ, ಪಾಕಿಸ್ತಾನ ಮಂಡಿಯೂರುವಂತೆ ಮಾಡಿತು.

TAGGED:Bhushan KumarindiaOperation SindoorPahalgam AttackVivek Agnihotriಆಪರೇಷನ್‌ ಸಿಂಧೂರಪಹಲ್ಗಾಮ್ ಅಟ್ಯಾಕ್ಭೂಷಣ್ ಕುಮಾರ್ವಿವೇಕ್ ಅಗ್ನಿಹೋತ್ರಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
45 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
46 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
47 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
1 hour ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
1 hour ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?