Connect with us

Crime

ನಿರ್ಮಾಣ ಹಂತದ ಸೇತುವೆ ಕುಸಿತ- 3 ಮಂದಿ ಭಾರತೀಯರ ಸಾವು

Published

on

ಥಿಂಪು: ನಿರ್ಮಾಣ ಹಂತದಲ್ಲಿರುವ ಒಂದು ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ 3 ಮಂದಿ ಸಾವನ್ನಪ್ಪಿದ್ದು, 6 ಮಂದಿ ಕಣ್ಮರೆಯಾಗಿರುವ ಘಟನೆ ಭೂತಾನ್‍ನಲ್ಲಿ ನಡೆದಿದೆ.

ವಾಂಗ್ಚು ಸೇತುವೆ ನಿರ್ಮಾಣ ಹಂತದಲ್ಲೇ ಕುಸಿದು ಬಿದ್ದಿದೆ. ಈ ವೇಳೆ ಸೇತುವೆ ಮೇಲೆ 9 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ. ಮೂರು ಶವಗಳು ಪತ್ತೆಯಾಗಿವೆ, 6 ಮಂದಿ ನಾಪತ್ತೆಯಾಗಿದ್ದಾರೆ ಕಾರ್ಯಾಚಣೆ ನಡೆಸಲಾಗುತ್ತಿದೆ. ಈ ಅವಘಡಕ್ಕೆ ಕಾರಣ ಏನು ಎಂಬುದು ತಿಳಿದಿಲ್ಲ. ಕೆಲಸ ಮಾಡುತ್ತಿದ್ದ ಕಾರ್ಮಿಕರಿಗಾಗಿ ಶೊಧ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.

ಈ ದುರಂತದಲ್ಲಿ ಕಳೆದುಹೋಗಿರುವ ಜೀವಗಳಿಗಾಗಿ ಪ್ರಾರ್ಥನೆ ಮಾಡುತ್ತೇನೆ. ಕಾಣೆಯಾದ ಎಲ್ಲರೂ ಸುರಕ್ಷಿತವಾಗಿ ಬರಲಿ ಎಂದು ಭಾವಿಸುತ್ತೇವೆ ಎಂದು ಪ್ರಧಾನಿ ಲೋಟ್ಯಾ ತ್ಯೆರಿಂಗ್ ಟ್ವೀಟ್ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *