ಜೊಹಾನ್ಸ್ ಬರ್ಗ್: ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಪರ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ.
24 ರನ್ ಗಳಿಗೆ 5 ವಿಕೆಟ್ ಪಡೆದು ಗೆಲುವಿನ ರೂವಾರಿಯಾದ ಭುವಿ, ಟೀಂ ಇಂಡಿಯಾ ಪರ ಕ್ರಿಕೆಟ್ ಟೆಸ್ಟ್, ಏಕದಿನ, ಟಿ20 ಮೂರು ಮಾದರಿಯಲ್ಲಿ 5 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Advertisement
ಟಿ20 ಮಾದರಿಯಲ್ಲಿ 5 ವಿಕೆಟ್ ಉರುಳಿಸುವ ಮೂಲಕ ಈ ಸಾಧನೆ ಮಾಡಿದ ಎರಡನೇ ಟೀಂ ಇಂಡಿಯಾ ಬೌಲರ್ ಎಂಬ ಹೆಗ್ಗಳಿಕೆ ಪಡೆದರು. ಈ ಹಿಂದೆ ಟೀಂ ಇಂಡಿಯಾ ಯುವ ಸ್ಪಿನ್ ಬೌಲರ್ ಯಜುವೇಂದ್ರ ಚಹಲ್ 5 ವಿಕೆಟ್ ಉರುಳಿಸಿದ್ದರು.
Advertisement
Advertisement
ಪಂದ್ಯದ 18ನೇ ಓವರ್ ನಲ್ಲಿ ಭುವಿ ಹ್ಯಾಟ್ರಿಕ್ ವಿಕೆಟ್ ಪಡೆಯುವ ಅವಕಾಶದಿಂದ ವಂಚಿತರಾದರು. ಇದಕ್ಕೂ ಮುನ್ನ ದಕ್ಷಿಣ ಆಫ್ರಿಕಾ ಸಂಕಷ್ಟ ಸಮಯದಲ್ಲಿ ಉತ್ತಮ ಜೊತೆಯಾಟವಾಡುತ್ತಿದ್ದ ರೀಝ ಹೆಂಡ್ರಿಕ್ಸ್ (70) ಮತ್ತು ಫರ್ಹಾನ್ ಬೆಹರ್ಡಿನ್ (39) ಜೋಡಿಯನ್ನು ಔಟ್ ಮಾಡಿದ್ದರು.
Advertisement
ಭುವಿ ಈ ಓವರ್ ನಲ್ಲಿ ಮೂರು ವಿಕೆಟ್ ಪಡೆದರೆ, ಕೊನೆಯ ಎಸೆತದಲ್ಲಿ ರನೌಟ್ ಆಗುವ ಮೂಲಕ ದಕ್ಷಿಣ ಆಫ್ರಿಕಾ 5 ವಿಕೆಟ್ ಕಳೆದುಕೊಂಡಿತು. ಆಫ್ರಿಕಾ ವಿರುದ್ಧ ಅತ್ಯುತ್ತಮ ಬೌಲಿಂಗ್ ದಾಖಲೆ ಮಾಡಿದ ವಿಶ್ವದ ಬೌಲರ್ ಗಳ ಪಟ್ಟಿಯಲ್ಲಿ ಭುವನೇಶ್ವರ್ ಮೂರನೇ ಸ್ಥಾನ ಪಡೆದರು. ಅಲ್ಲದೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಭುವನೇಶ್ವರ್ ವೃತ್ತಿ ಜೀವನದಲ್ಲಿ ಟೆಸ್ಟ್ ಮಾದರಿಯಲ್ಲಿ 82 ರನ್ ನೀಡಿ 6 ವಿಕೆಟ್, ಏಕದಿನದಲ್ಲಿ 42 ರನ್ ನೀಡಿ 5 ವಿಕೆಟ್ ಪಡೆಯುವ ಮೂಲಕ ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ.
ಪಂದ್ಯದ ನಂತರ ಮಾತನಾಡಿದ ಭುವಿ, ದೇಶದ ಪರ ಆಡುವ ಸಂದರ್ಭದಲ್ಲಿ ವಿಕೆಟ್ ಪಡೆಯುವುದು ಹೆಚ್ಚು ಪ್ರಾಮುಖ್ಯತೆ ಪಡೆಯುತ್ತದೆ. ಆದರೆ 5 ವಿಕೆಟ್ ಪಡೆಯುವುದು ಅಲ್ಲ. ಪ್ರತಿ ಪಂದ್ಯದಲ್ಲಿ ಗೆಲುವು ಪಡೆಯುವುದು ಮುಖ್ಯ. ಮೂರು ಮಾದರಿಯಲ್ಲಿ ಐದು ವಿಕೆಟ್ ಸಿಕ್ಕಿರುವುದು ಸಂತೋಷವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೊದಲ ಟಿ-20ಯಲ್ಲಿ ಧೋನಿಯಿಂದ ವಿಶ್ವದಾಖಲೆ