ಮುಂಬೈ: ಭಾರತ ತಂಡದ ಸ್ವಿಂಗ್ ಕಿಂಗ್ ಭುವನೇಶ್ವರ್ ಕುಮಾರ್ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯದಲ್ಲಿ 4 ವಿಕೆಟ್ ಕಿತ್ತು ಮಿಂಚುವ ಮೂಲಕ 10 ವರ್ಷಗಳ ಬಳಿಕ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ.
Advertisement
ಭುವಿ 2012 ರಲ್ಲಿ ಟೀಮ್ ಇಂಡಿಯಾ ಟಿ20 ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಈ ಪಂದ್ಯದಲ್ಲಿ ಪವರ್ ಪ್ಲೇ ಓವರ್‌ಗಳಲ್ಲಿ 3 ವಿಕೆಟ್ ಕಬಳಿಸಿ ಮಿಂಚು ಹರಿಸಿದ್ದರು. ಇದೀಗ 10 ವರ್ಷಗಳ ಬಳಿಕ ಅಂತಹದ್ದೇ ಸಾಧನೆಯನ್ನು ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಭುವಿ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಪವರ್ ಪ್ಲೇ ಓವರ್‌ಗಳಲ್ಲಿ 3 ವಿಕೆಟ್ ಕಿತ್ತು ಕಾಡಿದರು. ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಎರಡನೇ ಬಾರಿ ಈ ಸಾಧನೆಗೆ ಪಾತ್ರರಾದರು. ಇದನ್ನೂ ಓದಿ: ವಿಶ್ವದ ದುಬಾರಿ ಕ್ರೀಡೆಯಾಗಿ ಹೊರಹೊಮ್ಮಿದ IPL
Advertisement
Advertisement
ಇದಲ್ಲದೆ ಭುವಿ ಟಿ20 ಕ್ರಿಕೆಟ್‍ನಲ್ಲಿ ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪೈಕಿ ಮೂರನೇ ಸ್ಥಾನಕ್ಕೆ ಏರಿದ್ದಾರೆ. ಟಿ20 ಕ್ರಿಕೆಟ್‍ನಲ್ಲಿ ಭಾರತದ ಬೌಲರ್‌ಗಳಾದ ಯಜುವೇಂದ್ರ ಚಹಲ್ 69 ಮತ್ತು ಜಸ್ಪ್ರೀತ್ ಬುಮ್ರಾ 67 ವಿಕೆಟ್ ಪಡೆದು ಮೊದಲ 2 ಸ್ಥಾನದಲ್ಲಿದ್ದರೆ, ಭುವಿ ಮೂರನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಕನ್ನಡ ಸಿನಿಮಾದಲ್ಲಿ ನಟಿಸಿದ್ರಾ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ?: ರಕ್ಷಿತ್ ಶೆಟ್ಟಿ ಸಿನಿಮಾದಲ್ಲಿ ಮಾಜಿ ಕ್ರಿಕೆಟ್ ನಾಯಕ
Advertisement
https://twitter.com/AbdullahNeaz/status/1536010185449230341
ಭುವನೇಶ್ವರ್ ಕುಮಾರ್ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 4 ಓವರ್ ಎಸೆದು ಕೇವಲ 13 ರನ್ ನೀಡಿ 4 ವಿಕೆಟ್ ಕಿತ್ತು ಶೈನ್ ಆದರು. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 148ರನ್ ಗಳಿಸಿ, ಎದುರಾಳಿ ದಕ್ಷಿಣ ಆಫ್ರಿಕಾಗೆ 149 ರನ್‍ಗಳ ಸಾಧಾರಣ ಮೊತ್ತದ ಗುರಿ ನೀಡಿತು. ಈ ರನ್‍ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ನಿಗದಿತ 18.2 ಓವರ್‌ಗಳಲ್ಲಿ 6 ವಿಕೆಟ್‍ಗಳ ನಷ್ಟಕ್ಕೆ 149 ರನ್‍ಗಳಿಸುವ ಮೂಲಕ ಸತತ 2ನೇ ಗೆಲುವು ದಾಖಲಿಸಿತು.