ಬೆಂಗಳೂರು/ರಾಮನಗರ: ಬಿಡದಿಯ (Bidadi0 ರೈತರು ಒಳ್ಳೆಯವರು, ಅವರನ್ನು ದಾರಿ ತಪ್ಪಿಸಲಾಗುತ್ತಿದೆ. ಈ ಯೋಜನೆಯ ಪಿತಾಮಹ ಕುಮಾರಸ್ವಾಮಿ ಅವರೇ ಅಲ್ಲವೇ? ಇದನ್ನು ಅವರೇ ಒಪ್ಪಿಕೊಂಡಿದ್ದಾರೆ ಎಂದು ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿರುಗೇಟು ನೀಡಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ಕುಮಾರಸ್ವಾಮಿ (HD Kumaraswamy) ಅವರೇ ರೈತರಿಗೆ ಪರಿಹಾರವಾಗಿ ಅಭಿವೃದ್ಧಿಪಡಿಸಿದ ಭೂಮಿಯಲ್ಲಿ 40% ಕೊಡುತ್ತೇನೆ ಎಂದು ಹೇಳಿದ್ದರು. ನಾವು ಶೇ.50ರಷ್ಟು ಭೂಮಿ ನೀಡುವುದಾಗಿ ಹೇಳಿದ್ದೇವೆ. ರೈತರಿಗೆ ಒಂದು ಎಕರೆಗೆ 2.50 ಕೋಟಿ ರೂ. ಪರಿಹಾರ ನೀಡುವ ಕೆಲಸ ಶುಕ್ರವಾರ ಆರಂಭವಾಗಿದೆ. ಕುಮಾರಸ್ವಾಮಿ ಅವರು ನೋಟಿಫಿಕೇಷನ್ ಮಾಡಿ, ಯಡಿಯೂರಪ್ಪನವರು (BS Yediyurappa) ಈ ಯೋಜನೆ ಮುಂದುವರೆಸಿದ್ದರು. ಅದನ್ನು ನಾವು ಇನ್ನಷ್ಟು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆಯೇ ಹೊರತು ಹೊಸದಾಗಿ ನಾವೇನೂ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಡದಿ ಟೌನ್‌ಶಿಪ್ ವಿರೋಧಿಸಿ ನಿಖಿಲ್ ನೇತೃತ್ವದಲ್ಲಿ ನಾಳೆ ಬೃಹತ್ ಪಾದಯಾತ್ರೆ
ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನ ಮಾಡಿದವರು ಯಾರು? ಈಗಿರುವ 9 ಸಾವಿರ ಎಕರೆಯಲ್ಲಿ 1 ಸಾವಿರ ಎಕರೆಯನ್ನು ಬಿಜೆಪಿಯ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಅವರು ಸ್ವಾಧೀನ ಮಾಡಿಕೊಡಲಿಲ್ಲವೇ? ವಿರೋಧ ಪಕ್ಷದವರು ರಾಜಕೀಯಕ್ಕಾಗಿ ವಿರೋಧ ಮಾಡುತ್ತಿದ್ದಾರೆ. ಹೊಸ ಕೈಗಾರಿಕೆಗಳು ಬರಬೇಕು ಎಂದು ಹೇಳುತ್ತಾರೆ. ಕೇಂದ್ರ ಬೃಹತ್ ಕೈಗಾರಿಕಾ ಸಚಿವರೇ ಎಲ್ಲಿಂದ ಜಮೀನು ತೆಗೆದುಕೊಡಲಿ ಎಂದು ಹೇಳಿದ್ದಾರೆ. ಹೀಗಿರುವಾಗ ಬಿಡದಿ ಜಮೀನನ್ನು ಡಿನೋಟಿಫಿಕೇಷನ್ ಮಾಡಿ, ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬಿಡದಿ ಟೌನ್‌ಶಿಪ್ ಜಟಾಪಟಿ | 7,481 ರಿಂದ 9,600 ಎಕರೆ ಸ್ವಾಧೀನಕ್ಕೆ ಸಂಚು – ಸಿಎಸ್‌ಗೆ ಜೆಡಿಎಸ್ ದೂರು
ಬಿಡದಿ ಪ್ರದೇಶವನ್ನು ರೆಡ್ ಜೋನ್ ಎಂದು ಕುಮಾರಸ್ವಾಮಿ ಅವರು ಏಕೆ ಘೋಷಣೆ ಮಾಡಿದರು ಎಂದು ಅವರು ಮೊದಲು ತಿಳಿಸಲಿ. ನೋಟಿಫಿಕೇಷನ್ ಏಕೆ ಮಾಡಿದರು ಎಂದು ಉತ್ತರಿಸಲಿ. ಯಡಿಯೂರಪ್ಪ ಅವರು ಏಕೆ ಮುಂದುವರೆಸಿದರು, ಅವರ ಕಾಲದಲ್ಲೇ ಡಿನೋಟಿಫಿಕೇಷನ್ ಮಾಡಲು ಅವರಿಗೆ ಅವಕಾಶವಿತ್ತಲ್ಲವೇ? ಯಾಕೆ ಮಾಡಲಿಲ್ಲಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಗ್ರಾಮಗಳಿಗೆ ಬಿಜೆಪಿ ನಿಯೋಗ ಭೇಟಿ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ. ಆದರೆ ನಾನು ಇದಕ್ಕೆ ಬೇಸರ ಮಾಡಿಕೊಳ್ಳುವುದಿಲ್ಲ. ಶೇ.80ರಷ್ಟು ರೈತರು ಭೂಮಿ ನೀಡಲು ಮುಂದೆ ಬಂದಿದ್ದಾರೆ. ಬೇರೆಯವರು ಮುಂದೆ ಬರಲಿಲ್ಲ ಎಂದರೆ ನಾನು ಏನು ಮಾಡಲು ಸಾಧ್ಯವಿಲ್ಲ. ನಾವು ಕಾನೂನಿನ ಪ್ರಕಾರ ಹೋಗುತ್ತೇವೆ. ಕುಮಾರಸ್ವಾಮಿ ಅವರ ರಕ್ತಕ್ರಾಂತಿ ಆಗುತ್ತದೆ ಬಗ್ಗೆ ಮಾತನಾಡಿ, ಅವರು ದೊಡ್ಡವರು. ಬೃಹತ್ ಕೈಗಾರಿಕಾ ಸಚಿವರು. ಅವರಿಗೆ ಕೈಗಾರಿಕೆಗಳನ್ನು ತರಬೇಕು ಎನ್ನುವ ಆಸೆಯಿದೆ. ಎಲ್ಲಿಗೆ ಕೈಗಾರಿಕೆಗಳನ್ನು ತರಬೇಕು, ಹೇಗೆ ತರಬೇಕು, ಯಾರ ಜಮೀನಿನಲ್ಲಿ ತರಬೇಕು ಎಂದು ಅವರೇ ಉತ್ತರ ಹೇಳಬೇಕು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಬಿಡದಿ ಟೌನ್‌ಶಿಪ್‌ಗೆ ಜಾಗ ಕೊಟ್ಟ ರೈತರಿಗೆ ಚೆಕ್ ವಿತರಿಸಿದ ಸರ್ಕಾರ
