ಬೆಂಗಳೂರು: ಬಿಡದಿ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ (JDS) ಪಾದಯಾತ್ರೆಗೆ ಮುಂದಾದ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಈ ಯೋಜನೆಯನ್ನು ಸಮರ್ಥಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್ ಯೋಜನೆಗೆ (Bidadi Township Project) ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್ ಯೋಜನೆಗೆ ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ… pic.twitter.com/rb6eXgAFhv
— CM of Karnataka (@CMofKarnataka) August 9, 2026
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ರೈತರು, ಹೆಣ್ಣುಮಕ್ಕಳು ಗಟ್ಟಿಯಾಗಿದ್ರೆ ಬಿಡದಿ ಟೌನ್‌ಶಿಪ್ ಆಗಲ್ಲ: ಹೆಚ್‌ಡಿಕೆ
ಈ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿರುವುದಿಲ್ಲ. ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.



