– ಕಂದಾಯ ಗ್ರಾಮಗಳ ಅಂತಿಮ ಅಧಿಸೂಚನೆ ಪ್ರಕಟ!
ರಾಮನಗರ: ಬಿಡದಿ ಟೌನ್ಶಿಪ್ (Bidadi Township) ಜಟಾಪಟಿ ಮುಂದುವರಿದಿದ್ದು, ರೈತರ ತೀವ್ರ ವಿರೋಧದ ನಡುವೆಯೂ ಸರ್ಕಾರ ಉಳಿದೆರಡು ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಿದೆ.
ಯೋಜನಾ ವ್ಯಾಪ್ತಿಗೆ ಒಳಪಡುವ ಕಂಚುಗಾರನಹಳ್ಳಿ ಹಾಗೂ ಭೈರಮಂಗಲ ಗ್ರಾಮಗಳ ಭೂಸ್ವಾಧೀನಕ್ಕೆ ಫೈನಲ್ ನೋಟಿಫಿಕೇಷನ್ ಪ್ರಕಟಿಸಿದೆ. ಭೈರಮಂಗಲ ಗ್ರಾಮದ 1,866 ರೈತರಿಗೆ ಸೇರಿದ ಒಟ್ಟು 1,130 ಎಕರೆ ಭೂಮಿ ಹಾಗೂ ಕಂಚುಗಾರನಹಳ್ಳಿ ಗ್ರಾಮದ 1,405 ರೈತರಿಗೆ ಸೇರಿದ ಒಟ್ಟು 753 ಎಕರೆ ಭೂಮಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಬಿಡದಿ ಟೌನ್ಶಿಪ್ ಯೋಜನೆಗಾಗಿ ಒಟ್ಟು 9 ಕಂದಾಯ ಗ್ರಾಮಗಳ ಪೈಕಿ ಈಗಾಗಲೇ ಬನ್ನಿಗಿರಿ, ಅರಳಾಳುಸಂದ್ರ, ಕೆ.ಜಿ.ಗೊಲ್ಲರಪಾಳ್ಯ, ಹೊಸೂರು, ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮಗಳಿಗೆ ಸರ್ಕಾರ ಫೈನಲ್ ನೋಟಿಫಿಕೇಷನ್ ಮಾಡಿತ್ತು. ಇದೀಗ ಬಾಕಿ ಉಳಿದಿದ್ದ ಭೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸುವ ಮೂಲಕ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದಕ್ಕೆ ಕೊಂಡೊಯ್ದಿದೆ.
ಸರ್ಕಾರದ ನಡೆ ವಿರುದ್ಧ ರೈತರ ಆಕ್ರೋಶ ಹೆಚ್ಚಾಗಿದ್ದು, ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

