ಬೀದರ್: ಮಹಾರಾಷ್ಟ್ರಲ್ಲಿರುವ ತವರು ಮನೆಗೆ ಹೋಗಿದ್ದ ತನ್ನ ಪತ್ನಿಯನ್ನು ಕರೆದುಕೊಂಡು ಬರಲು ತೆರೆಳಿದ್ದ ಪತಿಯ ಬೈಕಿಗೆ ಗೂಡ್ಸ್ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಸವಕಲ್ಯಾಣ ಹಾಗೂ ಮಹಾರಾಷ್ಟ್ರ ಗಡಿ ಭಾಗದ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಈ ಅಪಘಾತ ನಡೆದಿದೆ. ಬಸವಕಲ್ಯಾಣ ತಾಲೂಕಿನ ಕೋಹಿನೂರವಾಡಿ ಗ್ರಾಮದ ಧೂಳಪ್ಪ ವಿಠಲ್ ಕುನಾಳೆ (35) ಮೃತ ದುರ್ದೈವಿ. ಕೋಯಿನೂರವಾಡಿಯಿಂದ ಉಮ್ಮರ್ಗಾಕ್ಕೆ ಹೊರಟಿದ್ದ ವೇಳೆ ಬೈಕಿಗೆ ಹಿಂದಿನಿಂದ ಗೂಡ್ಸ್ ಲಾರಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಧೂಳಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪತಿ ಸಾವನ್ನಪ್ಪಿದ ಸುದ್ದಿ ತಿಳಿದು ಪತ್ನಿ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಅಪಘಾತದ ಬಗ್ಗೆ ತಿಳಿದ ತಕ್ಷಣ ಸ್ಥಳಕ್ಕೆ ಉಮ್ಮರ್ಗಾ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.