-ನಾಲ್ಕೈದು ಜನರ ಹೆಸರು ಉಲ್ಲೇಖಿಸಿ ಪತ್ರ ಬರೆದಿರುವ ಮುಖಂಡ
ಬೀದರ್: ಹಣಕಾಸಿನ ವ್ಯವಹಾರ ವಿಚಾರಕ್ಕೆ ಮನನೊಂದು ಬಿಜೆಪಿ (BJP) ಮುಖಂಡ ಹಾಗೂ ಉದ್ಯಮಿ ನಾಪತ್ತೆಯಾಗಿರುವ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ (Basavakalyana) ಪಟ್ಟಣದಲ್ಲಿ ನಡೆದಿದೆ.
ಬಿಜೆಪಿ ಮುಖಂಡ ಹಾಗೂ ಬಸವಕಲ್ಯಾಣ ಶಾಸಕ ಶರಣು ಸಲಗರ್ ಆಪ್ತರಾಗಿರುವ ಸಂಜೀವಕುಮಾರ್ ಸುಗೂರೆ (Sanjeevkumar Sugure) ನಾಪತ್ತೆಯಾಗಿದ್ದು, ಜಿಲ್ಲಾ ಹಾಗೂ ರಾಜ್ಯ ಬಿಜೆಪಿಯ ಪ್ರಮುಖ ನಾಯಕರ ಜೊತೆ ಸುಗೂರೆ ಉತ್ತಮ ಒಡನಾಟ ಹೊಂದಿದ್ದಾರೆ. ಅ.13 ಭಾನುವಾರದಿಂದ ತಮ್ಮ ಮನೆಯಿಂದಲೇ ನಾಪತ್ತೆಯಾಗಿದ್ದಾರೆ.ಇದನ್ನೂ ಓದಿ: ‘ಕೆರಳಿದ ಸಿಂಹ’ ಚಿತ್ರದ ನಿರ್ದೇಶಕ ಚಿ.ದತ್ತರಾಜ್ ನಿಧನ
ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ನಾಲ್ಕೈದು ಜನರ ಹೆಸರು ಉಲ್ಲೇಖಿಸಿ ಪತ್ರ ಬರೆದಿರುವ ಮಾಹಿತಿ ಲಭಿಸಿದೆ. ಮೊಬೈಲ್, ಕಾರು ಸೇರಿದಂತೆ ಯಾವುದನ್ನು ತೆಗೆದುಕೊಂಡು ಹೋಗದೇ ನಡೆದುಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ತಮ್ಮ ನಿವಾಸದಿಂದ ಹೊರಗೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಹುತೇಕ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ.
ಸದ್ಯ ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾನಾ ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ.ಇದನ್ನೂ ಓದಿ: ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್