ಬೀದರ್: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನು ನೇಣು ಬಿಗಿದು ಕೊಲೆ ಮಾಡಿ ಪತಿರಾಯ ಪರಾರಿಯಾದ ಘಟನೆ ಬೀದರ್ ತಾಲೂಕಿನ ಕಾಡವಾಡ ಗ್ರಾಮದಲ್ಲಿ ನಡೆದಿದೆ.
ಕ್ರಿಸ್ತ ಕುಮಾರಿ(28) ವರದಕ್ಷಿಣೆ ಕಿರುಕುಳಕ್ಕೆ ಕೊಲೆಯಾದ ಮಹಿಳೆಯಾಗಿದ್ದು, ಕೊಲೆ ಮಾಡಿ ಪತಿರಾಯ ಇಮನ್ವೆಲ್ ಪರಾರಿಯಾಗಿದ್ದಾನೆ. ಮಕ್ಕಳಾಗದ ಕಾರಣ 5 ವರ್ಷದಿಂದ ಪತಿರಾಯ ವರದಕ್ಷಿಣೆ ಕಿರುಕುಳ ನೀಡುತ್ತಿದ್ದು ತಡರಾತ್ರಿ ಮತ್ತೆ ವರದಕ್ಷಿಣೆ ಕುರುಕಿಳ ನೀಡಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.
ಈಗಾಗಲೇ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮಹಿಳೆಯ ಮೃತದೇಹ ರವಾನೆ ಮಾಡಲಾಗಿದೆ. ಬಗದಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರ ತನಿಖೆಯಿಂದ ಸತ್ಯಾಸತ್ಯತೆ ಬಹಿರಂಗವಾಗಲಿದೆ.