ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್‌ನಲ್ಲಿ (Bidar Contractor Case) ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲ. ಡೆತ್ ನೋಟ್‌ನಲ್ಲಿ ಸಚಿವರ ಹೆಸರು ಇಲ್ಲ. ಹೀಗಾಗಿ ರಾಜೀನಾಮೆ ಪಡೆಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಅವರು ದಾಖಲಾತಿ ಇಟ್ಟುಕೊಂಡು ಹೋರಾಟ ಮಾಡಬೇಕು. ಸಚಿನ್ ಡೆತ್ ನೋಟ್ ಬರೆದಿದ್ದಾನೆ. ಅದರಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಇಲ್ಲ. ಯಾಕೆ ಅವರು ರಾಜೀನಾಮೆ ಕೊಡಬೇಕು. ಅವರ ಪಾತ್ರ ಏನು ಇಲ್ಲ, ಹಾಗಾದರೆ ಯಾಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದ್ದಾರೆ.
Advertisement
ಈಶ್ವರಪ್ಪ ಕೇಸ್‌ನಲ್ಲಿ ಡೆತ್ ನೋಟ್‌ನಲ್ಲಿ ಈಶ್ವರಪ್ಪ ಹೆಸರು ಇತ್ತು. ಈ ಕೇಸ್‌ನಲ್ಲಿ ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಇದೆಯಾ? ಪ್ರಿಯಾಂಕ್ ಖರ್ಗೆ ಹೆಸರು ಎಲ್ಲೂ ಕೂಡಾ ಇಲ್ಲ. ಪ್ರಿಯಾಂಕ್ ಖರ್ಗೆ ಈಗಾಗಲೇ ಹೇಳಿದ್ದಾರೆ ಯಾವುದೇ ತನಿಖೆಗೆ ಸಿದ್ದ ಅಂತ. ಈಗ ನಾವು ದೂರಿನ ಮೇಲೆ CODಗೆ ಪ್ರಕರಣ ಕೊಟ್ಟಿದ್ದೇವೆ. COD ವರದಿ ಕೊಡಲಿ. ವರದಿ ಕೊಟ್ಟ ಮೇಲೆ ಪ್ರಿಯಾಂಕ್ ಖರ್ಗೆ ತಪ್ಪು ಮಾಡಿದ್ದಾರೆ ಎಂದು ಗೊತ್ತಾಗಬೇಕಲ್ಲವಾ? ಸದ್ಯಕ್ಕೆ ಅವರ ಮೇಲೆ ಯಾವುದೇ ದಾಖಲೆ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ್ದಾರೆ.
Advertisement
Advertisement
ಪ್ರಕರಣವನ್ನ CBIಗೆ ಕೊಡಬೇಕು ಎಂಬ ಬಿಜೆಪಿ ಒತ್ತಾಯ ಬಿಜೆಪಿ ವಿರುದ್ದ ಕಿಡಿಕಾರಿದ ಅವರು, ಯಾಕೆ ಸಿಬಿಐಗೆ ಕೊಡಬೇಕು. ಅವರು ಯಾವಾಗ ಸಿಬಿಐಗೆ ಕೊಟ್ಟಿದ್ರು? ನಮ್ಮ ಪೊಲೀಸರ ಮೇಲೆ ನಂಬಿಕೆ ಇಲ್ಲವಾ ಅವರಿಗೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಒಂದೇ ಒಂದು ಕೇಸ್ ಸಿಬಿಐಗೆ ಕೊಟ್ಟಿರಲಿಲ್ಲ. ಹೀಗಿರುವಾಗ ಸಿಬಿಐಗೆ ಕೊಡಿ ಅಂತ ಕೇಳೋಕೆ ಬಿಜೆಪಿ ಅವರಿಗೆ ಯಾವ ನೈತಿಕತೆ ಇದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement
ಯಾವುದೇ ಸಾಕ್ಷಿ ಇಲ್ಲದೆ, ಡೆತ್ ನೋಟ್‌ನಲ್ಲಿ ಹೆಸರು ಇಲ್ಲದೇ ರಾಜೀನಾಮೆ ಹೇಗೆ ಪಡೆಯೋದು? ಬಿಜೆಪಿಯವರು ರಾಜಕೀಯ ದ್ವೇಷದಿಂದ ಆರೋಪ ಮಾಡ್ತಿದ್ದಾರೆ ಎಂದು ದೂರಿದ್ದಾರೆ.