ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಬಿಜೆಪಿ (BJP) ಪ್ರಿಯಾಂಕ್ ಖರ್ಗೆಯವರ ಮೇಲೆ ಆರೋಪ ಮಾಡುತ್ತಿದೆ. ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದಿದ್ದಾರೆ.
Advertisement
Advertisement
ಸಚಿವರ ಹೆಸರು ಎಲ್ಲೂ ಡೆತ್‍ನೋಟ್‍ನಲ್ಲಿ ನೇರವಾಗಿ ಇಲ್ಲ. ಇನ್ನೂ ಬಿಜೆಪಿಯವರು ಸಿಬಿಐಗೆ ಕೊಡಲಿ ಎಂದು ಹೇಳುತ್ತಿದ್ದಾರೆ. ಅನಾವಶ್ಯಕ ರಾಜಕೀಯ ಮಾಡುವುದು ಸರಿಯಲ್ಲ. ಎಲ್ಲ ಕೇಸ್‍ಗಳನ್ನು ಸಿಬಿಐಗೆ ಕೊಡೋಕೆ ಸಾಧ್ಯವಿಲ್ಲ. ಸಿಐಡಿ ತನಿಖೆ ನಡೆಸಲು ಸಮರ್ಥವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement
Advertisement
ಪ್ರಿಯಾಂಕ್ ಖರ್ಗೆಯವರು (Priyank Kharge) ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಬಿಜೆಪಿಯವರು ಅನಗತ್ಯವಾಗಿ ಅವರ ಹೆಸರು ತಂದು ರಾಜೀನಾಮೆಗೆ ಒತ್ತಾಯ ಮಾಡುತ್ತಿದ್ದಾರೆ. ಅವರು ಹೇಳಿದಂತೆ ಕೇಳೋಕೆ ಆಗಲ್ಲ ಎಂದು ಕಿಡಿಕಾರಿದ್ದಾರೆ.