ಬೀದರ್: ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.
ಬೀದರ್ ನಿಂದ ಒಟ್ಟು 27 ಜನರು ದೆಹಲಿ ನಿಜಾಮುದ್ದೀನ್ ಮರ್ಕಜ್‍ಗೆ ತೆರಳಿದ್ದರು. 27 ಜನರಲ್ಲಿ 11 ಮಂದಿಗೆ ಕೊರೊನಾ ತಗುಲಿದೆ ಎಂದು ಬೀದರ್ ಜಿಲ್ಲಾಧಿಕಾರಿ ಮಹದೇವ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಿಂದ ಮೌಲ್ವಿಗಳು ದೆಹಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗಿದ್ದಾರೆ. ಪಬ್ಲಿಕ್ ಟಿವಿಗೆ ಲಭ್ಯವಾದ ಪ್ರಾಥಮಿಕ ಮಾಹಿತಿ ಪ್ರಕಾರ, ರಾಜ್ಯದಿಂದ ದೆಹಲಿಗೆ ಹೋಗಿ ಬಂದವರ ಸಂಖ್ಯೆ 430 ದಾಟುತ್ತದೆ. ದೆಹಲಿಗೆ ಹೋಗಿ ಬಂದವರಿಗೆ ಬಲೆ ಬೀಸಿರುವ ರಾಜ್ಯ ಸರ್ಕಾರ, ಇದುವರೆಗೆ 391 ಮಂದಿಯನ್ನು ಪತ್ತೆ ಹಚ್ಚಿದೆ. ಈ ಪೈಕಿ 200 ಮಂದಿಯನ್ನು ಆಸ್ಪತ್ರೆಗಳಲ್ಲಿ ಇರಿಸಿ ನಿಗಾ ವಹಿಸಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೇನ್ ಮಾಡಲಾಗಿದೆ. ಉಳಿದವರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಬುಧವಾರ ತಿಳಿಸಿದ್ದರು.