ಬೀದರ್: ಕೋವಿಡ್ ಲಸಿಕೆ ಪಡೆಯಲು ಹಿಂಜರಿಯುತ್ತಿದ್ದ ವಯೋವೃದ್ಧೆಯ ಮನವೊಲಿಸಿ ಕೊನೆಗೂ ಲಸಿಕೆ ಹಾಕಿಸುವಲ್ಲಿ ಶಾಸಕರೊಬ್ಬರು ಯಶಸ್ವಿಯಾಗಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.
ತಾಲ್ಲೂಕಿನ ಖಾಶೆಂಪುರ ಪಿ. ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ 85 ವಯಸ್ಸಿನ ರತ್ನಮ್ಮ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದರು. ಈ ವೇಳೆ ಸ್ವತಃ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಅಜ್ಜಿಯ ಮನೆಗೆ ಬಂದು ಲಸಿಕೆ ಪಡೆಯುವಂತೆ ಅವರ ಮನೆವೊಲಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆಯ 25 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು
ನನಗೆ ಆರೋಗ್ಯ ಸರಿಯಿಲ್ಲ. ಆಸ್ಪತ್ರೆಗೆ ಅಲೆದು ದಣಿದಿದ್ದೇನೆ. ಹೀಗಾಗಿ ನಾನು ಲಸಿಕೆ ಪಡೆಯುವುದಿಲ್ಲ ಎಂದು ವೃದ್ಧೆ ಪಟ್ಟು ಹಿಡಿದಿದ್ದಾರೆ. ಆಗ ಶಾಸಕರು, ವಾರಕ್ಕೆ ಒಂದು ಬಾರಿ ನಾವೇ ಬಂದು ನಿಮ್ಮ ಆರೋಗ್ಯ ತಪಾಸಣೆ ಮಾಡುತ್ತೇವೆ. ವೈದ್ಯಕೀಯ ನೆರವು ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಶಾಸಕರ ಮನವೊಲಿಕೆಯಿಂದ ವೃದ್ಧೆ ಕೊನೆಗೂ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಒಮಿಕ್ರಾನ್ ಆತಂಕ – ಸೋಂಕಿತ ರಾಷ್ಟ್ರಗಳಿಂದ ಬರೋರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ
ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ನಿಟ್ಟುಸಿರು ಬಿಡುವ ಹೊತ್ತಿನಲ್ಲೇ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಕೊರೊನಾ ರೂಪಾಂತರಿ ಓಮಿಕ್ರಾನ್ ಆತಂಕ ಮೂಡಿಸಿದೆ. ಹೊಸ ತಳಿ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದೆ. ಪ್ರತಿಯೊಬ್ಬರೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಳ್ಳಬೇಕು ಎಂಬ ವಿಚಾರವನ್ನು ಒತ್ತಿ ಹೇಳಿದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದೆ.