ಬೀದರ್: ಜಿಲ್ಲೆಯಲ್ಲಿ ಚಳಿ ಹೆಚ್ಚಾಗಿರುವ ಕಾರಣ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶೈಕ್ಷಣಿಕ ಪ್ರವಾಸ (Educational Tour) ರದ್ದುಪಡಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ಈ ಸಮಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕೈಗೊಳ್ಳಲಾಗುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ಪ್ರವಾಸ ರದ್ದುಪಡಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕೋ ಕೆಲಸ ಬಿಜೆಪಿ ಮಾಡಿದೆ: ಆರ್.ಅಶೋಕ್
ಈ ಕುರಿತು ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಮಾತನಾಡಿ, ತಾಪಮಾನ ಕುಸಿತ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಈಗಾಗಲೇ ಆಡಳಿತ ಸಲಹೆ ನೀಡಿದೆ. ಹೀಗಾಗಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಸದ್ಯಕ್ಕೆ ಪ್ರವಾಸಗಳನ್ನು ಮುಂದೂಡಬೇಕು ಎಂದು ಬೇಡಿಕೆ ಮಂಡಿಸಿದರು. ಬಳಿಕ ಚಳಿ ಕಡಿಮೆಯಾದ ನಂತರ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ಅಜೀಮ್ ಪಟೇಲ್, ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಕಾರ್ಯದರ್ಶಿ ಜಿತೇಂದ್ರ ರಾಠೋಡ್, ಪ್ರಧಾನ ಸಂಚಾಲಕ ಸುಧಾಕರ್ ರಾಠೋಡ್, ಜಗದೀಶ್ ಬಿರಾದಾರ, ಸಂತೋಷ ಪಾಟೀಲ, ಗುರುನಾಥ ರಾಠೋಡ್ ಇದ್ದರು.ಇದನ್ನೂ ಓದಿ: Mumbai Boat Accident | 7 ವರ್ಷದ ಬಾಲಕನ ಮೃತದೇಹ ಪತ್ತೆ – ಮೃತರ ಸಂಖ್ಯೆ 15ಕ್ಕೆ ಏರಿಕೆ