ಬೆಂಗಳೂರು: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ (Maha Kumbh Mela) ತೆರಳುತ್ತಿದ್ದ ವೇಳೆ ಉತ್ತರ ಪ್ರದೇಶದ (Uttar Pradesh) ಬಳಿ ಅಪಘಾತದಲ್ಲಿ ಬೀದರ್‌ನ (Bidar) ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು, 8 ಜನರು ಗಾಯಗೊಂಡಿರುವ ಸುದ್ದಿ ತಿಳಿದು ಆಘಾತವಾಯಿತು. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥವ ಶರೀರವನ್ನು ಬೀದರ್‌ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪರಿಚಯಸ್ಥ ಮಹಿಳೆ ಮೇಲೆ ಗ್ಯಾಂಗ್ ರೇಪ್
Advertisement
Advertisement
ಉತ್ತರಪ್ರದೇಶದಲ್ಲಿ ಕರ್ನಾಟಕದವರಾದ ಚನ್ನಪ್ಪ ಎಂಬ ಅಧಿಕಾರಿಯಿದ್ದು ಅವರೊಂದಿಗೆ ಮಾತನಾಡಿ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ತಿಳಿಸಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಗಂಗಾ ನೀರು ಸ್ನಾನಕ್ಕೆ ಸುರಕ್ಷಿತ.. ಅದರ ಸಂಪರ್ಕದಿಂದ ಚರ್ಮ ರೋಗಗಳು ಬರಲ್ಲ: ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್