ಬೀದರ್: ವೈದ್ಯರು ಕರೆ ನೀಡಿದ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬೀದರ್ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲದೆ, ಬೀದರ್‍ನ ಸರ್ಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಸಹ ಬಂದ್ ಆಗಿದ್ದು, ಚಿಕಿತ್ಸೆಗಾಗಿ ರೋಗಿಗಳು ಹಾಗೂ ಗರ್ಭಿಣಿಯರು ಪರದಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ.
ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ವಿಧೇಯಕ ವಿರೋಧಿಸಿ ಇಂದು ಖಾಸಗಿ ಆಸ್ಪತ್ರೆಗಳ ವೈದ್ಯರು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆ ಕೆಲವೆಡೆ ಖಾಸಗಿ ಆಸ್ಪತ್ರೆಗಳು ತೆರೆದಿದ್ದರೆ, ಇನ್ನೂ ಕೆಲವೆಡೆ ಆಸ್ಪತ್ರೆಗಳು ಬಂದ್ ಆಗಿವೆ. ಬೀದರ್‍ನಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಖಾಸಗಿ ಆಸ್ಪತ್ರೆಗಳ ಜೊತೆಗೆ ಸರ್ಕಾರಿ ಆಸ್ಪತ್ರೆಯನ್ನೂ ಬಂದ್ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳು ಮಾತ್ರ ಬಂದ್ ಆಗಿರುತ್ತವೆ, ಸರ್ಕಾರಿ ಆಸ್ಪತ್ರೆಗಳು ತೆರೆದಿರುತ್ತವೆ ಎಂದು ಆಗಮಿಸಿದ್ದ ರೋಗಿಗಳು ಹಾಗೂ ಗರ್ಭಿಣಿಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
Advertisement
Advertisement
ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೀದರ್ ಬ್ರಿಮ್ಸ್ ಜಿಲ್ಲಾಸ್ಪತ್ರೆಯ ವೈದ್ಯರೂ ಸಹ ಕೆಲಸಕ್ಕೆ ಹಾಜರಾಗಿರಲಿಲ್ಲ. ಚಿಕಿತ್ಸೆಗಾಗಿ ರೋಗಿಗಳು, ಗರ್ಭಿಣಿಯರು ಕ್ಯೂನಲ್ಲಿ ನಿಂತು ಸುಸ್ತಾಗಿದ್ದಾರೆ. ಸ್ಕ್ಯಾನ್ ಮಾಡಿಸಲು ಬೆಳಗ್ಗೆ 6 ಗಂಟೆಯಿಂದಲೇ ರೋಗಿಗಳು ಸರತಿಯಲ್ಲಿ ನಿಂತ್ತಿದ್ದು, ಮಧ್ಯಾಹ್ನ 12 ಗಂಟೆಯಾದರೂ ಸಹ ವೈದ್ಯರು ಕೆಲಸಕ್ಕೆ ಹಾಜರಾಗಿಲ್ಲ. ಹೀಗಾಗಿ ವೈದ್ಯರ ವಿರುದ್ಧ ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಬೆಳಗ್ಗೆಯಿಂದಲೇ ವೈದ್ಯರಿಗಾಗಿ ಕಾದು ಗರ್ಭಿಣಿ ಮಹಿಳೆಯರು ಹಾಗೂ ರೋಗಿಗಳು ಹೈರಾಣಾಗಿದ್ದು, ಸರತಿಯಲ್ಲಿ ನಿಲ್ಲಲೂ ಸಾಧ್ಯವಾಗದೇ ನೆಲದ ಮೇಲೆಯೇ ಮಲಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆಯೇ ವೈದ್ಯರ ಮುಷ್ಕರದ ಕುರಿತು ಎಚ್ಚರಿಕೆ ನೀಡಲಾಗಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಗಳು ತೆರೆದಿರುವುದಿಲ್ಲ ಎಂದು ಸರ್ಕಾರಿ ಆಸ್ಪತ್ರೆಗೆ ರೋಗಿಗಳು ಆಗಮಿಸಿದ್ದರು.
Advertisement
ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‍ಎಂಸಿ) ವಿಧೇಯಕವನ್ನು ವಿರೋಧಿಸಿ ಬುಧವಾರ ಇಂಡಿಯನ್ ಮೆಡಿಕಲ್ ಅಸೋಷಿಯೇಷನ್(ಐಎಂಎ) ದೇಶಾದ್ಯಂತ ವೈದ್ಯರ ಮುಷ್ಕರಕ್ಕೆ ಕರೆ ನಿಡಿದ್ದು, ಸುಮಾರು 24 ಗಂಟೆಗಳ ಕಾಲ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಬಹುತೇಕ ಖಾಸಗಿ ಆಸ್ಪತ್ರೆಯ ಒಪಿಡಿ ಸಾರ್ವಜನಿಕ ಸೇವೆಗೆ ಲಭ್ಯವಿಲ್ಲ. ಬುಧವಾರ ಬೆಳಗ್ಗೆ ಆರು ಗಂಟೆಯಿಂದ ಗುರುವಾರ ಬೆಳಗ್ಗೆ ಆರು ಗಂಟೆಯವರೆಗೆ ಮುಷ್ಕರ ನಡೆಯಲಿದ್ದು, ವೈದ್ಯರ ಸೇವೆಯಲ್ಲಿ ವ್ಯತ್ಯಯವಾಗುತ್ತಿದೆ.