Connect with us

ರೆಮಿಡಿಸಿವರ್ ಅಕ್ರಮವಾಗಿ ಮಾರಾಟ – ಬೀದರ್‌ನಲ್ಲಿ ಇಬ್ಬರ ಬಂಧನ

ರೆಮಿಡಿಸಿವರ್ ಅಕ್ರಮವಾಗಿ ಮಾರಾಟ – ಬೀದರ್‌ನಲ್ಲಿ ಇಬ್ಬರ ಬಂಧನ

ಬೀದರ್: ಕಾಳಸಂತೆಯಲ್ಲಿ ರೆಮಿಡಿಸಿವರ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಸುತ್ತಿದ್ದ ಶೇಖ್ ಅಬ್ದುಲ್ಲಾ ಹಾಗೂ ಆರೋಗ್ಯ ಇಲಾಖೆಯ ಜೊತೆ ಸಂಪರ್ಕದಲ್ಲಿರುವ ಮಹಮ್ಮದ್ ವಾಸಿಂ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ನಗರ ಠಾಣೆಯ ಪೊಲೀಸರು ಬೀದರ್ ನ ಓಲ್ಡ್ ಸಿಟಿಯ ಗವಾನ್ ಚೌಕ್ ಬಳಿ ದಾಳಿ ಮಾಡಿ ಇಬ್ಬರು ಆರೋಪಿಯನ್ನು ಬಂಧಿಸಿದ್ದಾರೆ.

ಕಾಳಸಂತೆಯಲ್ಲಿ ರೆಮಿಡಿಸಿವರ್ ಅಕ್ರಮವಾಗಿ ಮಾರಾಟವಾಗುತ್ತಿದೆ ಎಂಬ ಮಾಹಿತಿ ಪಡೆದ ಪೊಲೀಸರು ಕೊನೆಗೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊರೊನಾ ಪೀಡಿತರಿಗೆ 20 ರಿಂದ 25 ಸಾವಿರಕ್ಕೆ ರೆಮಿಡಿಸಿವರ್ ಮಾರಾಟ ಮಾಡುತ್ತಿದ್ದ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಈ ಕುರಿತು ಬೀದರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

Advertisement
Advertisement