ಬೀದರ್: ತಡರಾತ್ರಿ ಎಸ್‍ಬಿಐ ಬ್ಯಾಂಕ್‍ಗೆ ನುಗ್ಗಿ ಕಂಪ್ಯೂಟರ್ ಹಾಗೂ ಕೆಲವು ಸಲಕರಣೆಗಳನ್ನು ಕದ್ದು ಕಳ್ಳನೊಬ್ಬ ಪರಾರಿಯಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ತಾಲೂಕಿನ ಖೇಣಿ ರಜೋಳ ಗ್ರಾಮದ ಎಸ್‍ಬಿಐ ಬ್ಯಾಂಕ್ ಕಿಟಕಿ ಒಡೆದು ಅರೆ ಬೆತ್ತಲೆಯಾಗಿ ಒಳ್ಳ ನುಗ್ಗಿದ ದರೋಡೆಕೋರ ತನ್ನ ಕೈಚಳಕ ತೋರಿಸಿ ಪರಾರಿಯಾಗಿದ್ದಾನೆ. ಈ ಎಲ್ಲಾ ದೃಶ್ಯಗಳು ಬ್ಯಾಂಕಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನೈಸ್ ಖ್ಯಾತಿಯ ಅಶೋಕ್ ಖೇಣಿ ಸ್ವಗ್ರಾಮದಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡದಿಂದ ತೀವ್ರ ಪರಿಶೀಲನೆ ನಡೆಸಲಾಗಿದೆ. ಬಗದಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪರಾರಿಯಾಗಿರುವ ಆರೋಪಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ.