ಬೀದರ್: ಕಳೆದ 15 ದಿನಗಳಿಂದ ದೇಶದ್ರೋಹದ ಪ್ರಕರಣದಲ್ಲಿ ಬಂಧಿತರಾಗಿದ್ದ ಬೀದರ್ ನ ಶಾಲೆಯ ಮುಖ್ಯ ಶಿಕ್ಷಕಿ ಫರಿನಾಭಾನು ಮತ್ತು ಶಾಲೆಯ ಮಗುವಿನ ತಾಯಿ ನಶೀಮಾಗೆ ಇಂದು ಕೋರ್ಟ್ ಜಾಮೀನು ನೀಡಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಮಾವತಿ ಮನಗೂಳಿಯವರು ಜಾಮೀನು ಮಂಜೂರು ಮಾಡಿದ್ದಾರೆ. ಫೆ.11 ರಂದು ಆರೋಪಿಗಳ ಪರವಾಗಿ ಬೆಂಗಳೂರಿನ ಹಿರಿಯ ವಕೀಲರಾದ ಬಿ.ಟಿ ವೆಂಕಟೇಶ್‍ರವರು ವಾದ ಮಂಡಿಸಿದ್ದರು. ಇಂದಿಗೆ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಇಂದು ಜಾಮೀನು ನೀಡಿದೆ.
Advertisement
Advertisement
ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಸಿಎಎ ವಿರುದ್ಧ ಪಠ್ಯೇತರ ಚಟುವಟಿಕೆಗಳ ಭಾಗವಾಗಿ ಮಕ್ಕಳಿಂದ ನಾಟಕ ಆಡಿಸಲಾಗಿತ್ತು. ಅದರಲ್ಲಿ ಯಾರಾದರೂ ದಾಖಲೆ ಕೇಳಿ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂಬ ಸಂಭಾಷಣೆ ಇದ್ದ ಕಾರಣ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೂರು ದಾಖಲಾಗಿತ್ತು. ಇದಾದ ನಂತರ ಪೊಲೀಸರು ಶಾಲೆಯ ಮುಖ್ಯ ಶಿಕ್ಷಕಿ ಫರೀದಾಭಾನು ಮತ್ತು ಶಾಲೆಯ ಮಗುವಿನ ತಾಯಿ ನಶೀಮಾ ಎಂಬವರನ್ನು ಕಳೆದ 15 ದಿನಗಳಿಂದ ಬಂಧಿಸಿ ಜೈಲಿನಟ್ಟಿದ್ದರು.