ಬೀದರ್: ಬಾವಿಗೆ ಬಿದ್ದು ಸಾವನ್ನಪ್ಪಿರುವ ಸಹೋದರಿಯರಿಬ್ಬರ ಆತ್ಮಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 4 ಜನ ಆರೋಪಿಗಳ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಸಂಬಾಜೀ, ವಿಠಲ್, ರಾಣಿ ಬಂಧಿತ ಆರೋಪಿಗಳಾಗಿದ್ದಾರೆ. ನಾಲ್ಕು ಜನ ಆರೋಪಿಗಳನ್ನು ಮೇಹಕರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಡಾ.ಪುನೀತ್ ರಾಜ್‍ಕುಮಾರ್ ನೆನೆದು ಗುಣಗಾನ ಮಾಡಿದ ಪ್ರಿಯಾಂಕ್ ಖರ್ಗೆ
Advertisement
ನಡೆದಿದ್ದೇನು?: ಎರಡು ದಿನಗಳ ಹಿಂದೆ ಅಂಕಿತ(15) ಹಾಗೂ ಶ್ರದ್ಧಾ(13) ಸಹೋದರಿಯರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಅಟ್ಟರ್ಗಾ ಗ್ರಾಮದಲ್ಲಿ ಘಟನೆಯಾಗಿದ್ದು, ಈ ಕುರಿತು ಮೇಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು.
Advertisement
Advertisement
ಮದುವೆ ಸಂಬಂದ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿತ್ತು. ಈ ವೇಳೆ ಸಂಬಾಜೀ, ಸಹೋದರಿಯರ ಪೋಷಕರ ಮೇಲೆ ಹಲ್ಲೆ ಮಾಡಿದ್ದನು. ಈ ವಿಚಾರವಾಗಿ ಮನನೊಂದು ಸಹೋದರಿಯರಿಬ್ಬರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು.