ಬೀದರ್: ಕಲ್ಲಿನಿಂದ ಹೊಡೆದು ಯುವಕನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಹೊರ ವಲಯದ ಚಿಕ್ಕ ಪೇಟೆ ಬಳಿ ಇಂದು ನಡೆದಿದೆ.
ನಗರದ ಖಾಸಗಿ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಯುವಕ ಶರಣು ಕೊಲೆಯಾದ ದುರ್ದೈವಿ. ಇವನು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ ಗ್ರಾಮದವನಾಗಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಹೀಗಾಗಿ ಪೊಲೀಸರು ತೀವ್ರವಾಗಿ ತನಿಖೆ ಮಾಡುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.