ಅರಬ್ ನಾಯಕರ ಜೊತೆಗಿನ ಬೈಡೆನ್ ಮೀಟಿಂಗ್ ಕ್ಯಾನ್ಸಲ್

Public TV
1 Min Read
JOE BAIDEN 1

ಟೆಲ್‍ಅವಿವ್: ಯುದ್ಧದ ಬಿಕ್ಕಟ್ಟಿನ ನಡುವೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ (Joe Baiden) ಇಂದು ಭೇಟಿ ನೀಡುತ್ತಿದ್ದಾರೆ. ಈ ಬೆನ್ನಲ್ಲೇ ಗಾಜಾ ಆಸ್ಪತ್ರೆಯ (Gaza Hospital) ಮೇಲೆ ಭಾರೀ ದಾಳಿಯಾಗಿದೆ. ಈ ಹಿನ್ನೆಲೆಯಲ್ಲಿ ಅರಬ್ ನಾಯಕರ (Arab Leaders) ಜೊತೆಗಿನ ಬೈಡೆನ್ ಮೀಟಿಂಗ್ ರದ್ದುಗೊಳಿಸಲಾಗಿದೆ.

ಗಾಜಾ ಆಸ್ಪತ್ರೆಯಲ್ಲಿ ಭೀಕರ ಸ್ಫೋಟ ಪ್ರಕರಣದಿಂದ 500 ಮಂದಿಯ ಸಾವನ್ನಪ್ಪಿದ್ದಾರೆ. ಹೀಗಾಗಿ ಇಸ್ರೇಲ್‍ಗೆ ಬೆಂಬಲ ಸೂಚಿಸುವ ಅಮೆರಿಕ ಪ್ರಯತ್ನಕ್ಕೆ ತೀವ್ರ ಹಿನ್ನಡೆಯಾಗಿದೆ. ಅಲ್ಲದೆ ಅಮ್ಮಾನ್ ನಲ್ಲಿ ನಡೆಯಬೇಕಿದ್ದ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಅರಬ್ ಮುಖಂಡರ ಸಭೆ ಕೂಡ ರದ್ದಾಗಿದೆ.

ಜೋರ್ಡಾನ್ ವಿದೇಶಾಂಗ ವ್ಯವಹಾರಗಳ ಸಚಿವ ಐಮನ್ ಸಫಾದಿ, ಜೋರ್ಡಾನ್ ದೊರೆ ಅಬ್ದುಲ್ಲಾ, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತೇಹ್ ಎಲ್ ಸೀಸಿ ಮತ್ತು ಫೆಲಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮುಹಮ್ಮದ್ ಅಬ್ಬಾಸ್ ಅವರು ಬೈಡೆನ್ ಜೊತೆ ಬುಧವಾರ ಅಮ್ಮಾನ್ ನಲ್ಲಿ ನಡೆಸಲು ಉದ್ದೇಶಿಸಿದ್ದ ಸಭೆ ರದ್ದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಗಾಜಾ ಆಸ್ಪತ್ರೆಯ ಮೇಲೆ ರಾಕೆಟ್‌ ದಾಳಿಗೆ 500 ಬಲಿ – ದಾಳಿ ಮಾಡಿದವರು ಯಾರು?

ಹಮಾಸ್ ಹಾಗೂ ಇಸ್ರೇಲ್ ನಡುವಿನ ಕಾಳಗಕ್ಕೆ ಇಂದು 12ನೇ ದಿನ. ಅಕ್ಟೋಬರ್ 7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ಆರಂಭಿಸಿದ್ದಾರೆ. ಈ ದಾಳಿಯಲ್ಲಿ 1300 ಮಂದಿ ಮೃತಪಟ್ಟಿದ್ದಾರೆ. ಇಸ್ರೇಲಿನ 250 ಮಂದಿಯನ್ನು ಹಮಾಸ್ ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದರೆ, ಹಮಾಸ್ ನ 200 ಮಂದಿ ಇಸ್ರೇಲ್ ಸೆರೆಯಲ್ಲಿದ್ದಾರೆ.

Web Stories

Share This Article