Bengaluru CityCinemaDistrictsKarnatakaLatestMain PostSandalwood
`ಬಿಗ್ ಬಾಸ್’ ಖ್ಯಾತಿಯ ಶಶಿ ಮದುವೆ ಡೇಟ್ ಫಿಕ್ಸ್: ಹುಡುಗಿ ಇವರೇ

Advertisements
ಕನ್ನಡ ಕಿರುತೆರೆಯ ಬಿಗ್ ಬಾಸ್ ಖ್ಯಾತಿಯ ಶಶಿಕುಮಾರ್ ಈಗ ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸದ್ಯ ನಿಶ್ಚಿತಾರ್ಥ ಮಾಡಿಕೊಂಡಿರುವ ನಟ ಶಶಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಬಿಗ್ ಬಾಸ್ ಮನೆಯ ಮಾಡರ್ನ್ ರೈತ ಎಂದೇ ಫೇಮಸ್ ಆಗಿರುವ ಶಶಿಕುಮಾರ್ ಇದೇ ಆಗಸ್ಟ್ 6 ಹಾಗೂ 7ರಂದು ಬೆಂಗಳೂರಿನಲ್ಲಿ ಹಸೆಮಣೆ ಏರಲಿದ್ದಾರೆ. ದೊಡ್ಡಬಳ್ಳಾಪುರದ ವಧು ಸ್ವಾತಿ ಎಂಬುವವರ ಕೈ ಹಿಡಿಯಲಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಕೃಷಿ ಕುಟುಂಬದ ಸ್ವಾತಿ ಅವರ ಜೊತೆ ಶಶಿ ಅವರ ನಿಶ್ಚಿತಾರ್ಥ ನೆರವೇರಿದೆ.
ಜಿಕೆವಿಕೆ ಕೃಷಿ ವಿದ್ಯಾಲಯದಲ್ಲಿ ಮಾಸ್ಟರ್ ಡಿಗ್ರಿ ಪಡೆದಿರುವ ಇವರು ನೂತನ ತಂತ್ರಜ್ಞಾನ ಉಪಯೋಗಿಸುವಲ್ಲಿ ಮುಂದು. ಶಶಿಕುಮಾರ್ ಚಿಕ್ಕಬಳ್ಳಾಪುರದ ಚಿಂತಾಮಣಿ ಮೂಲದವರಾಗಿದ್ದು, ತಮ್ಮ ಮದುವೆಯ ಬಗ್ಗೆ ಗುಡ್ ನ್ಯೂಸ್ ನೀಡಿದ್ದಾರೆ. ಶಶಿ ಈಗ `ಮೆಹಬೂಬ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದ್ದಾರೆ.
Live Tv