ರಾಜ್ಯದಲ್ಲಿ ಗಣೇಶೋತ್ಸವಕ್ಕೆ ಸರ್ಕಾರ ಷರತ್ತುಬದ್ಧ ಅನುಮತಿ ನೀಡುವುದು ಪಕ್ಕಾ ಆಗಿದೆ. ಇವತ್ತಿನ ಸಭೆಯಲ್ಲಿ ಚರ್ಚೆ ನಡೆಸಿದ್ದರೂ, ಸೆ.5ಕ್ಕೆ ನಿರ್ಧಾರ ಪ್ರಕಟಿಸಲು ಸರ್ಕಾರ ತೀರ್ಮಾನಿಸಿದೆ. ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಇವತ್ತಿನ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಗಣೇಶೋತ್ಸವಕ್ಕೆ ಷರತ್ತಿನ ಅನುಮತಿ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು ಹಾಗೂ ಎಸ್‍ಪಿಗಳ ಜೊತೆ ಚರ್ಚಿಸಿ ಸರ್ಕಾರ ತನ್ನ ನಿರ್ಧಾರ ಪ್ರಕಟಿಸಲಿದೆ. ಕಳೆದ ಬಾರಿಗಿಂತ ಈ ಬಾರಿ ಕೆಲವೊಂದು ನಿರ್ಬಂಧ ಸಡಿಲಿಸುವ ಬಗ್ಗೆಯೂ ಸಚಿವ ಅಶೋಕ್ ಸುಳಿವು ನೀಡಿದ್ದಾರೆ.
ಬಿಗ್ ಬುಲೆಟಿನ್ | August 30, 2021 | ಭಾಗ-1
Leave a Comment