ನವದೆಹಲಿ: ಭೂಮಿಯಿಂದ ಸೂರ್ಯನತ್ತ (Sun) ಹೊರಟು ನಾಲ್ಕು ತಿಂಗಳ ಪೂರೈಸಿ, 15 ಲಕ್ಷ ಕಿ.ಮೀ ಕ್ರಮಿಸಿರುವ ಆದಿತ್ಯ ಎಲ್1 (Aditya-L1) ನೌಕೆಯನ್ನು ಇಂದು ಅದರ ನಿಗದಿತ ಕಕ್ಷೆಗೆ ಸೇರಿಸಲು ಇಸ್ರೋ (ISRO) ವಿಜ್ಞಾನಿಗಳು ಸಜ್ಜಾಗಿದ್ದಾರೆ.
ಕಳೆದ ವರ್ಷ ಸೆ.2ರಂದು ಆದಿತ್ಯ ಎಲ್1 ನೌಕೆಯನ್ನು ಇಸ್ರೋ ಉಡಾವಣೆ ಮಾಡಿತ್ತು. ಇದೀಗ 15 ಲಕ್ಷ ಕಿ.ಮೀ ಸಂಚರಿಸಿ ನಿಗದಿತ ಕಕ್ಷೆಯ ಬಳಿ ಸಮೀಪಿಸಿರುವ ಅದನ್ನು ಎಲ್1 ಪಾಯಿಂಟ್ ಎಂಬ ನಿರ್ವಾತ ಪ್ರದೇಶಕ್ಕೆ ಸೇರಿಸಲಾಗುತ್ತದೆ. ಉಪಗ್ರಹವನ್ನು ಸುಮಾರು ಸಂಜೆ 4 ಗಂಟೆಗೆ ಲ್ಯಾಗ್ರೇಂಜ್ ಪಾಯಿಂಟ್ 1 (L1) ಗೆ ಸೇರಿಸುವ ನಿರೀಕ್ಷೆಯಿದೆ. ಅಕಸ್ಮಾತ್ ಅದನ್ನು ಆ ಪ್ರದೇಶಕ್ಕೆ ಸೇರಿಸದೇ ಇದ್ದರೆ ಅದು ಸೂರ್ಯನೆಡೆಗೆ ಸಂಚರಿಸಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಇಂದು (ಶನಿವಾರ) ಇಸ್ರೋಗೆ ಮಹತ್ವದ ದಿನವಾಗಿದೆ. ಇದನ್ನೂ ಓದಿ: ಲಕ್ಷದ್ವೀಪಕ್ಕೆ ಮೋದಿ ಭೇಟಿ: ಮಾಲ್ಡೀವ್ಸ್‌ಗೆ ಬಿಗ್ ಶಾಕ್
Advertisement
Advertisement
ಎಲ್1 ಪಾಯಿಂಟ್ ಎಂಬುದು ಭೂಮಿಯಿಂದ ಸೂರ್ಯನಿಗಿರುವ ಒಟ್ಟು ದೂರದಲ್ಲಿ ನೂರನೇ ಒಂದರ ಭಾಗವಾಗಿದೆ. ಇಲ್ಲಿಂದ, ಹಗಲು, ರಾತ್ರಿ ಹಾಗೂ ಗ್ರಹಣಗಳ ಅಡೆತಡೆ ಇಲ್ಲದೇ ಆದಿತ್ಯ ಎಲ್1 ನೌಕೆಯು ಸೂರ್ಯನನ್ನು ನಿರಂತರವಾಗಿ ಅಧ್ಯಯನ ಮಾಡಲಿದೆ. ಸೂರ್ಯನಲ್ಲಿ ನಡೆಯುವ ಚಟುವಟಿಕೆಗಳು ಹಾಗೂ ಅಂತರಿಕ್ಷದ ವಾತಾವರಣದ ಮೇಲೆ ಅದರ ಪರಿಣಾಮವನ್ನು ಆದಿತ್ಯ ಎಲ್1 ಅಧ್ಯಯನ ನಡೆಸಲಿದೆ. ಆದಿತ್ಯ ಎಲ್1 ನಾಲ್ಕು ಪೆಲೋಡ್‍ಗಳನ್ನು ಹೊಂದಿದ್ದು, ಅಲ್ಲಿಂದ ನೇರವಾಗಿ ಇಸ್ರೋಗೆ ಮಾಹಿತಿ ರವಾನಿಸಲಿದೆ.
Advertisement
Advertisement
ಚಂದ್ರಯಾನ 3 ಯಶಸ್ವಿಯಾದ ಬಳಿಕ ಇದು ಇಸ್ರೋದ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಇದರ ಬೆನ್ನಲ್ಲೇ ಹೊಸವರ್ಷದ ಮೊದಲ ದಿನವೇ ಕಪ್ಪು ಕುಳಿಗಳ ಅಧ್ಯಯನಕ್ಕೆ ಎಕ್ಸ್‌ಪೋಸ್ಯಾಟ್ ಉಪಗ್ರಹದ ಉಡಾವಣೆಯನ್ನು ಇಸ್ರೋ ಯಶಸ್ವಿಯಾಗಿ ಮಾಡಿತ್ತು. ಇದನ್ನೂ ಓದಿ: ಮಸ್ಕ್‌ನ ಸ್ಪೇಸ್‍ಎಕ್ಸ್ ರಾಕೆಟ್‍ನಲ್ಲಿ ಶೀಘ್ರ ಇಸ್ರೋ ಉಪಗ್ರಹ ಉಡಾವಣೆ