ಬೆಂಗಳೂರು: ಇಂದು ಸಿದ್ದರಾಮಯ್ಯನವರಿಗೆ (CM Siddaramaiah) ಬಿಗ್ ಡೇ ಆಗಿರುವ ಕಾರಣ ಸಿಎಂ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರಿಸರ್ವ್ ಮಾಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಹಗರಣ ಕೇಸ್‌ಗೆ ಸಂಬಂಧಿಸಿದಂತೆ ರಾಜ್ಯಪಾಲರು (Governer) ಪ್ರಾಸಿಕ್ಯೂಷನ್ (Prosection) ಅನುಮತಿ ನೀಡಿರುವ ಹಿನ್ನೆಲೆ ಹೈಕೋರ್ಟ್‌ನಲ್ಲಿ (High Court) ವಿಚಾರಣೆ ನಡೆಯುತ್ತಿದೆ.ಇದನ್ನೂ ಓದಿ: ಸೌರ ಪ್ಯಾರಾಬೋಲಾಯ್ಡ್ ತಂತ್ರಜ್ಞಾನ; ನವೀಕರಿಸಬಹುದಾದ ಶಕ್ತಿಯ ಭರವಸೆ – ಏನಿದು ತಂತ್ರಜ್ಞಾನ?
ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್‌ನಲ್ಲಿ ಶನಿವಾರ ಎರಡು ದಿನಗಳ ಕಾಲ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು (ಸೆ.2) ಮಧ್ಯಾಹ್ನ 2:30ಕ್ಕೆ ನಡೆಯಲಿದೆ.
ಶನಿವಾರ ನಡೆದ ವಿಚಾರಣೆಯಲ್ಲಿ ಪ್ರತಿವಾದಿಗಳ ವಾದಕ್ಕೆ ಉತ್ತರ ಕೊಡಲು ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಸಮಯಾವಕಾಶ ನೀಡುವಂತೆ ಕೋರಿದ್ದರು. ನಂತರ ಕೋರ್ಟ್ ಇಂದು (ಸೆ.2) ವಿಚಾರಣೆಯನ್ನು ಮುಂದೂಡಿತ್ತು.ಇದನ್ನೂ ಓದಿ: ಯಾದಗಿರಿಯಲ್ಲಿ ನಿರಂತರ ಮಳೆಯಿಂದಾಗಿ ನಂದೆಪಲ್ಲಿ ಸೇತುವೆ ಸಂಪೂರ್ಣ ಜಲಾವೃತ
ಮಧ್ಯಾಹ್ನ ಹೈಕೋರ್ಟ್‌ನಲ್ಲಿ ವಿಚಾರಣೆ ಪ್ರಾರಂಭವಾಗಲಿರುವ ಹಿನ್ನೆಲೆ ವಕೀಲರ ಜೊತೆ ಚರ್ಚೆ ನಡೆಸಬೇಕು ಎಂಬ ಕಾರಣಕ್ಕೆ ಇಂದು ಸಂಜೆ 5 ಗಂಟೆಯವರೆಗೆ ಪೂರ್ವ ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಸಿಎಂ ಸಿದ್ದರಾಮಯ್ಯನವರು ಕಾಯ್ದಿರಿಸಿದ್ದಾರೆ.