ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ವಿತರಿಸುವ ಮಹತ್ವದ ಹಾಗೂ ಐತಿಹಾಸಿಕ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ.
ರಾಜ್ಯದಲ್ಲಿ ವಾಸವಿದ್ದು, ಇಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಈ ಉಚಿತ ಬಸ್ ಪಾಸ್ ಸೌಲಭ್ಯ ಅನ್ವಯಿಸಲಿದ್ದು, ಈ ಯೋಜನೆಗಾಗಿ ಸರ್ಕಾರ(Krnataka Government) ಒಟ್ಟು 286 ಕೋಟಿ ರೂಪಾಯಿ ವೆಚ್ಚ ಭರಿಸಲಿದೆ.
ನಿಯಮಗಳು:
– ವಿದ್ಯಾರ್ಥಿಗಳು ಉಚಿತ ಪಾಸ್ ಪಡೆಯಲು ತಮ್ಮ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಅಗತ್ಯ ಮಾನದಂಡ ಹಾಗೂ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸಬೇಕು.
– ವಿದ್ಯಾರ್ಥಿ ವಾಸಿಸುವ ಸ್ಥಳದಿಂದ ವಿದ್ಯಾಸಂಸ್ಥೆಗೆ ಸಂಚರಿಸುವ ನಿಗದಿತ ದೂರದ ಮಿತಿಗೆ ಅನುಗುಣವಾಗಿ ಪಾಸ್ ನೀಡಲಾಗುತ್ತದೆ.
– ವಿದ್ಯಾರ್ಥಿಯ ಪ್ರಸ್ತುತ ಶೈಕ್ಷಣಿಕ ವರ್ಷದ ಅವಧಿಗೆ ಅನುಸಾರವಾಗಿ ಈ ಪಾಸಿನ ಕಾಲಾವಧಿಯನ್ನು ನಿಗದಿಪಡಿಸಲಾಗುತ್ತದೆ.
– ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್ ಮೂಲಕ ಶಾಲೆಗಳು ಸೇರಿದಂತೆ ಎಲ್ಲಿಂದಲಾದರೂ ಆನ್‌ಲೈನ್‌ನಲ್ಲಿ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹಣ ಮರುಪಾವತಿ:
ಈ ಯೋಜನೆ ಜಾರಿಗೆ ಬರುವ ಮುನ್ನವೇ ಹಣ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಅವರು ಪಾವತಿಸಿರುವ ಮೊತ್ತವನ್ನು 15 ದಿನಗಳ ಒಳಗಾಗಿ ರಿಫಂಡ್ (ಮರುಪಾವತಿ) ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಈಗಾಗಲೇ ವಿತರಿಸಲಾಗಿರುವ ಬಸ್ ಪಾಸ್‌ಗಳು ಯಥಾವತ್ತಾಗಿ ಚಾಲ್ತಿಯಲ್ಲಿರಲಿವೆ.
