ನವದೆಹಲಿ: 2025ರ ಅಕ್ಟೋಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆ ಈ ಬಾರಿಯ ಬಜೆಟ್‌ನಲ್ಲಿ (Union Budget 2025) ಬಿಹಾರಕ್ಕೆ (Bihar) ಹೆಚ್ಚಿನ ಮಹತ್ವ ನೀಡಲಾಗಿದೆ. ಐಐಟಿ ಕಾಲೇಜು, ಮೆಡಿಕಲ್ ಕಾಲೇಜು ಹಾಗೂ ಆಹಾರ ಸಂಸ್ಕರಣೆಗೆ ಹೆಚ್ಚಿನ ಒತ್ತನ್ನು ಬಜೆಟ್‌ನಲ್ಲಿ ಕೊಡಲಾಗಿದೆ.
ಕಳೆದ ಬಾರಿ ಬಜೆಟ್‌ನಲ್ಲಿ ಆಂಧ್ರಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಈ ಬಾರಿ ಮೈತ್ರಿ ಪಕ್ಷಗಳಿರುವ ರಾಜ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬಿಹಾರದಲ್ಲಿ ಆಹಾರ ಸಂಸ್ಕರಣೆಗೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಡ್ ಟೆಕ್ನಾಲಜಿಯನ್ನು ನಿರ್ಮಾಣ ಮಾಡಲಾಗುವುದು. ಆಹಾರವಾಗಿ ಬಳಸುವ ಮಖನಾ ಉತ್ಪಾದನೆ, ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆಯನ್ನು ಸುಧಾರಿಸಲು ಬಿಹಾರದಲ್ಲಿ ಮಖನಾ ಮಂಡಳಿಯನ್ನು ಸ್ಥಾಪಿಸಲಾಗುವುದು. ಈ ಮಂಡಳಿಯು ಮಖನಾ ರೈತರಿಗೆ ತರಬೇತಿ ಬೆಂಬಲವನ್ನು ಒದಗಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದನ್ನೂ ಓದಿ: Budget 2025: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್
Advertisement
Advertisement
ಬಿಹಾರದಲ್ಲಿ ಗ್ರೀನ್‌ಫೀಲ್ಡ್ ಏರ್‌ಪೋರ್ಟ್ ನಿರ್ಮಾಣ ಮಾಡಲಾಗುವುದು. ಪಾಟ್ನಾ ವಿಮಾನ ನಿಲ್ದಾಣ ಅಭಿವೃದ್ಧಿ ಮಾಡಲಾಗುವುದು. ಐಐಟಿ ಪಾಟ್ನಾ ಸೇರಿದಂತೆ ಒಟ್ಟು ಐದು ಐಐಟಿ ಕಾಲೇಜುಗಳನ್ನು ಅಭಿವೃದ್ಧಿಪಡಿಸಲಾಗುವುದು. ಅಷ್ಟೇ ಅಲ್ಲದೇ 75,000 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಸೆಂಟರ್‌ಗಳನ್ನು ಮೂರು ವರ್ಷಗಳಲ್ಲಿ ನಿರ್ಮಿಸಲಾಗುವುದು. 2025-26ರ ವೇಳೆಗೆ 200 ಸೆಂಟರ್‌ಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಇದನ್ನೂ ಓದಿ: Budget 2025: 12 ಲಕ್ಷದವರೆಗೆ ತೆರಿಗೆ ವಿನಾಯಿತಿ – ಒಟ್ಟು ಎಷ್ಟು ಲಾಭ ಸಿಗುತ್ತೆ?
Advertisement
Advertisement
ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರ ಆಡಳಿತದಲ್ಲಿದೆ. ಎನ್‌ಡಿಎಯಲ್ಲಿ ನಿತೀಶ್ ನೇತೃತ್ವದ ಜೆಡಿಯು ಪಾತ್ರ ದೊಡ್ಡದಿರುವುದರಿಂದ ಬಿಹಾರಕ್ಕೆ ಈ ಬಜೆಟ್‌ನಲ್ಲಿ ಬಂಪರ್ ಘೋಷಣೆ ಮಾಡಲಾಗಿದೆ. ಬಜೆಟ್ ಭಾಷಣದಲ್ಲಿ ಬಿಹಾರದ ಹೆಸರು ಪ್ರಸ್ತಾಪವಾಗುತ್ತಿದ್ದಂತೆ ವಿಪಕ್ಷಗಳು, ಇದು ಬಿಹಾರ ಬಜೆಟ್ ನಮಗೆ ಏನು ಕೊಟ್ಟಿದ್ದೀರಿ ಎಂದು ಪ್ರಶ್ನಿಸಿ ಗದ್ದಲ ಉಂಟುಮಾಡಿದ ಪ್ರಸಂಗವೂ ನಡೆಯಿತು. ಇದನ್ನೂ ಓದಿ: Budget 2025: ರೈತರಿಗಾಗಿ ‘ಧನ್ ಧಾನ್ಯ ಕೃಷಿ’ ಯೋಜನೆ ಘೋಷಿಸಿದ ಸೀತಾರಾಮನ್