– ಬೆಂಗಳೂರು ಮೂಲಭೂತ ಸೌಕರ್ಯಕ್ಕೆ ಕೇಂದ್ರದಿಂದ ಖಾಲಿ ಚೆಂಬು
ಮೈಸೂರು: ಈ ಬಜೆಟ್ ದೇಶದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿಲ್ಲದ ಬಜೆಟ್. ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿರುವ ಬಜೆಟ್ ಇದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.
ಕೇಂದ್ರ ಬಜೆಟ್ (Union Budget 20255) ಹಿನ್ನೆಲೆ ಮೈಸೂರಿನಲ್ಲಿ (Mysuru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಇನ್ನೂ ಪೂರ್ಣ ಬಜೆಟ್ ಓದಿಲ್ಲ. ಬಜೆಟ್ ಭಾಷಣವನ್ನು ಪೂರ್ಣವಾಗಿ ನೋಡಿಲ್ಲ. ಬರೀ ಮುಖ್ಯಾಂಶಗಳನ್ನು ನೋಡಿದ್ದೇನೆ. ದೇಶದ ಹಿತದೃಷ್ಟಿಯಿಂದ, ಕರ್ನಾಟಕ ಹಿತದೃಷ್ಟಿಯಿಂದ ನಿರಾಶದಾಯಕ ಬಜೆಟ್. ದೂರದೃಷ್ಟಿ ಇಲ್ಲದ ಬಜೆಟ್. ರಾಜ್ಯವೂ ಅನೇಕ ಬೇಡಿಕೆಗಳನ್ನು ಇಟ್ಟಿತ್ತು. ನಮ್ಮ ಬೇಡಿಕೆಗಳು ಬೇಡಿಕೆಗಳಾಗಿಯೇ ಉಳಿದಿವೆ. ಒಂದೇ ಒಂದು ಬೇಡಿಕೆಯೂ ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಇದು ಜನಸಾಮಾನ್ಯರ ಬಜೆಟ್.. ಉಳಿತಾಯ, ಹೂಡಿಕೆಗೆ ಉತ್ತೇಜನ: ಮೋದಿ ಬಣ್ಣನೆ
ಬಜೆಟ್ ಗಾತ್ರವೂ ಕಡಿಮೆ ಆಗಿದೆ. ಕಳೆದ ಬಾರಿಗಿಂತ 1.04 ಲಕ್ಷ ಕೋಟಿ ಕಡಿಮೆ ಆಗಿದೆ. ತೆರಿಗೆ ಅವರು ಅಂದುಕೊಂಡಷ್ಟು ಸಂಗ್ರಹಿಸಿಲ್ಲ. ಕೇಂದ್ರ ಸರ್ಕಾರ ಸಾಲ 15,68,936 ಕೋಟಿ ಸಾಲ ಪಡೆಯುತ್ತಿದೆ. 12,70,000 ಕೋಟಿ ರೂ. ಬಡ್ಡಿ ಕಟ್ಟುತ್ತಿದೆ. ಈ ದೇಶದ ಸಾಲದ ಪ್ರಮಾಣ 202 ಲಕ್ಷ ಕೋಟಿಯಿಂದ 205 ಲಕ್ಷ ಕೋಟಿ ರೂ.ಗೆ ಏರುತ್ತಿದೆ. ಈ ಬಜೆಟ್ ನಿರಾಶದಾಯಕ ಬಜೆಟ್. ಕರ್ನಾಟಕಕ್ಕೆ ವಿರುದ್ದವಾಗಿರುವ ಬಜೆಟ್ ಇದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Budget 2025| ಕಿತ್ತಾಟ ನಡೆಸಿದ್ರೂ ಮಾಲ್ಡೀವ್ಸ್‌ಗೆ ಅನುದಾನ ಹೆಚ್ಚಳ,ಬಾಂಗ್ಲಾಗೂ ಸಹಾಯ- ಯಾವ ದೇಶಕ್ಕೆ ಎಷ್ಟು ಕೋಟಿ?
ಕರ್ನಾಟಕ ಹೆಚ್ಚು ತೆರಿಗೆ ಕಟ್ಟುತ್ತಿರುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿದೆ. ರಾಜಕೀಯ ಕಾರಣಕ್ಕೆ ಬಿಹಾರ, ಆಂಧ್ರಕ್ಕೆ ಹೆಚ್ಚು ಅನುದಾನ ಸಿಕ್ಕಿದೆ. ಬಿಹಾರ, ಆಂಧ್ರ ಪ್ರದೇಶಕ್ಕೆ ಹೆಚ್ಚು ಅನುದಾನ ಸಿಕ್ಕಿದೆ. ಮೇಕೆದಾಟು, ಭದ್ರಾ ಮೇಲ್ದಂಡೆ, ಕೃಷ್ಣ ಮೇಲ್ದಂಡೆ ಯೋಜನೆ ಯಾವುದಕ್ಕೂ ಹಣ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೊಡುತ್ತೇವೆ ಎಂದು ಕಳೆದ ಬಾರಿ ಘೋಷಿಸಿದ್ದರು. ಈವರೆಗೆ ಒಂದೂ ನಯಾಪೈಸೆಯೂ ಬಂದಿಲ್ಲ. ರಾಜಸ್ಥಾನ ಬಿಟ್ಟರೆ ಕರ್ನಾಟಕ ಹೆಚ್ಚು ಒಣ ಭೂಮಿ ಇರುವ ರಾಜ್ಯ. ಈ ರಾಜ್ಯಕ್ಕೆ ನೀರಾವರಿ ಯೋಜನೆಗಳಿಗೆ ಒಂದು ರೂಪಾಯಿ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷೆ ಇತ್ತು. ಕೇಂದ್ರ ಸಚಿವ ನಡ್ಡಾ ಇದಕ್ಕೆ ಭರವಸೆ ಕೊಟ್ಟಿದ್ದರು. ಅದರ ಪ್ರಸ್ತಾಪವೂ ಇಲ್ಲ ಎಂದು ಗುಡುಗಿದರು. ಇದನ್ನೂ ಓದಿ: ಎತ್ತುಗಳಿಗೆ ಸ್ನಾನ ಮಾಡಿಸಲು ಕೆರೆಗೆ ಹೋಗಿದ್ದ ರೈತನ ಮೇಲೆ ಮೊಸಳೆ ದಾಳಿ
ಬೆಂಗಳೂರಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ, ಬ್ಯುಸಿನೆಸ್ ಕಾರಿಡಾರ್ ಮಾಡಲು ಹಣ ಕೇಳಿದ್ದೆವು. ಅದಕ್ಕೆ ಅವರು ಕೊಟ್ಟಿದ್ದು ಖಾಲಿ ಚೆಂಬು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಲು ಕೇಳಿದ್ದೆವು, ಒಂದು ರೂಪಾಯಿ ಕೊಟ್ಟಿಲ್ಲ. ವಸತಿ ಯೋಜನೆಯ ಹಣ ಒಂದೂವರೆ ಲಕ್ಷದಿಂದ ಐದು ಲಕ್ಷಕ್ಕೆ ಹೆಚ್ಚಿಸಲು ಕೇಳಿದ್ದೆವು, ಅದನ್ನೂ ಮಾಡಿಲ್ಲ. ಮೋದಿ ಅವರ ಸರ್ಕಾರದ ಬಜೆಟ್ ಕರ್ನಾಟಕಕ್ಕೆ ಚೆಂಬು ಕೊಡುವುದನ್ನು ಮುಂದುವರಿಸಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: Union Budget 2025: 77 ನಿಮಿಷಗಳ ಕಾಲ 8ನೇ ಬಜೆಟ್ ಮಂಡಿಸಿದ ಸೀತಾರಾಮನ್
ಬಡವರಿಗೆ, ಕಾರ್ಮಿಕರಿಗೆ, ಯುವಕರಿಗೆ, ಮಹಿಳೆಯರಿಗೆ, ರೈತರ ಅಭಿವೃದ್ಧಿಗೆ ಖರ್ಚು ಮಾಡುವುದು ಬಿಟ್ಟು ಕಾರ್ಪೊರೇಟ್ ಕಂಪನಿಗಳಿಗೆ ಹೆಚ್ಚು ಮಣೆ ಹಾಕಲಾಗಿದೆ. ಬಿಹಾರ ಚುನಾವಣೆ ಬರುತ್ತಿರುವ ಹಿನ್ನಲೆ ಮೂರ್ನಾಲ್ಕು ಬಾರಿ ಪ್ರಸ್ತಾಪ ಮಾಡಿದ್ದಾರೆ ಎಂದು ಕೆಂಡಕಾರಿದ್ದಾರೆ. ಇದನ್ನೂ ಓದಿ: Union Budget 2025: ಯಾವುದು ಅಗ್ಗ, ಯಾವುದು ದುಬಾರಿ?