ತಮ್ಮ ಮೇಲೆ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ನಟ ಉಪೇಂದ್ರ (Upendra) ಹೈಕೋರ್ಟ್ ಮೆಟ್ಟಿಲು ಏರಿದ್ದರು. ಈಗಾಗಲೇ ತಾವು ಆಡಿದ ಮಾತಿನ ಬಗ್ಗೆ ಕ್ಷಮೆ ಕೇಳಿದ್ದೇನೆ. ಜೊತೆಗೆ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಿಂದಲೇ ಡಿಲಿಟ್ ಮಾಡಿದ್ದೇನೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲವೆಂದು ಎಂದು ಮನವಿ ಮಾಡಿಕೊಂಡಿದ್ದರು. ಈ ಅರ್ಜಿಗೆ ಸಂಬಂಧಿಸಿದ್ದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
Advertisement
ಉಪೇಂದ್ರ ಸಲ್ಲಿಸಿದ್ದ ಮನವಿಯನ್ನು ಏಕಸದಸ್ಯ ಪೀಠವು ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಉಪೇಂದ್ರ ಪರ ವಕೀಲ ಉದಯ್ ಹೊಳ್ಳ ವಾದ ಮಂಡಿಸಿ, ‘ಆ ಪದವನ್ನು ದುರುದ್ದೇಶದಿಂದ ಬಳಸಿದ್ದಲ್ಲ, ಉಪೇಂದ್ರ ಅವರು ಜನಪ್ರಿಯ ವ್ಯಕ್ತಿಯ ಜೊತೆ ಜವಾಬ್ದಾರಿಯುತ ವ್ಯಕ್ತಿಯು ಆಗಿದ್ದಾರೆ. ಅವರಿಗೆ ಎಲ್ಲರ ಬಗ್ಗೆಯೂ ಗೌರವವಿದೆ ಎಂದು ಮನವರಿಕೆ ಮಾಡಿಕೊಟ್ಟರು. ಉಪೇಂದ್ರ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿಗಳು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಗೆ ಸಂಬಂಧಿಸಿದಂತೆ ಮಾತ್ರ ಮಧ್ಯಂತರ ತಡೆಯಾಜ್ಞೆ (Interim stay) ನೀಡಿದೆ. ಇದನ್ನೂ ಓದಿ:Kiccha 46: ಸುದೀಪ್ ಸಿನಿಮಾದಲ್ಲಿ ಸಂಯುಕ್ತಾ ಹೊರನಾಡ್
Advertisement
Advertisement
ಒಂದು ಕಡೆ ಹೈಕೋರ್ಟ್ (High Court) ಮಧ್ಯಂತರ ಆದೇಶ ನೀಡಿದ್ದರೆ ಮತ್ತೊಂದು ಕಡೆ ಸಾಮಾಜಿಕ ಜಾಲತಾಣದಲ್ಲಿ ನಟ ಉಪೇಂದ್ರ ಜಾತಿನಿಂದನೆಯ (Caste abuse) ಅವಹೇಳನಕಾರಿ ಪದವನ್ನು ಬಳಸಿದ್ದಾರೆ ಎಂಬ ವಿಚಾರ ವಿಪರೀತ ಚರ್ಚೆಗೆ ಕಾರಣವಾಗಿದೆ. ಅವರು ಆಡಿದ ಮಾತುಗಳ ವಿಚಾರವಾಗಿ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ನಟ ಉಪೇಂದ್ರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿ ಅವರನ್ನು ಗಡಿಪಾರು ಮಾಡುವಂತೆ ಕೋಲಾರದಲ್ಲಿ ಆಗ್ರಹಿಸಲಾಗಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಉಪೇಂದ್ರ ವಿರುದ್ಧ ಮಾಲೂರು ಪೊಲೀಸ್ ಠಾಣೆಗೆ ದೂರು ನೀಡಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯ ಎಸ್.ಎಂ.ವೆಂಕಟೇಶ್ ಹಾಗೂ ವಿಜಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದಾರೆ.
Advertisement
ಬೆಂಗಳೂರಿನಲ್ಲಿ ಮೂರು ದೂರು ಹಾಗೂ ಕೋಲಾರದಲ್ಲಿ ಒಂದು ದೂರ ದಾಖಲಾದ ಬೆನ್ನಲ್ಲೇ ಮಂಡ್ಯದಲ್ಲೂ ಉಪೇಂದ್ರ ವಿರುದ್ದ ದೂರು ಸಲ್ಲಿಕೆಯಾಗಿದೆ. ಪರಿಶಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಮದ್ದೂರು ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಈ ದೂರು ಸಲ್ಲಿಕೆಯಾಗಿದೆ.
Web Stories