ಬೆಂಗಳೂರು: ಕೊರಟಗೆರೆಯಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿ ವೇಳೆ 500 ರೂ. ಬೆಟ್ಟಿಂಗ್ ಕಟ್ಟಿದ್ದ ಪ್ರಕರಣದಲ್ಲಿ ಗೃಹ ಸಚಿವ ಪರಮೇಶ್ವರ್ (G Parameshwar) ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಎಫ್‌ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ಕೋರ್ಟ್ ನೀಡಿರುವ ಆದೇಶ ರದ್ದುಕೋರಿ ಪರಮೇಶ್ವರ್ ಅವರು ಹೈಕೋರ್ಟ್‌ಗೆ (High Court) ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಶ್ನಿಸಿತು. ಗೃಹಸಚಿವ ಪರಮೇಶ್ವರ್ ಯಾವ ಗ್ಯಾಂಗ್‌ನ ಸದಸ್ಯರು? ಈ ವಿಚಾರವನ್ನು ತಮಾಷೆಗೆ ಹೇಳಿರುವುದು ಅಲ್ಲವೇ? ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ನೋಟಿಸ್ ನೀಡಬೇಕಿತ್ತು ಅಲ್ವಾ? ಅಂತ ಪ್ರಶ್ನಸಿದರು. ಇದನ್ನೂ ಓದಿ: ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ
ಪೊಲೀಸರು ಮತ್ತು ದೂರುದಾರ ನಾಗಭೂಷಣ್ ಅವರಿಗೆ ನೋಟಿಸ್ ಜಾರಿಗೊಳಿಸಿ, ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಅಂತಿಮವಾಗಿ, ಈ ಪ್ರಕರಣದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ದೊಡ್ಡ ರಿಲೀಫ್ ಲಭಿಸಿದ್ದು, ಕಬಡ್ಡಿ ಬೆಟ್ಟಿಂಗ್ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಇತ್ತೀಚಿಗಷ್ಟೇ ಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ. ಪರಮೇಶ್ವರ್ ವಿರುದ್ಧ ಎಫ್‌ಐಆರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು.
ಏನಿದು ಪ್ರಕರಣ?
ಚಿಕ್ಕೋಡಿ vs ವಿಜಯಪುರ ನಡುವೆ ಕಬಡ್ಡಿ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ಚಿಕ್ಕೋಡಿ ತಂಡ ಗೆಲ್ಲುವುದಾಗಿ ಪರಮೇಶ್ವರ್ ಅವರು 500 ರೂ. ಬೆಟ್ಟಿಂಗ್ ಕಟ್ಟಿದ್ದರು. ವಿಜಯಪುರ ತಂಡ ಗೆದ್ದ ಬಳಿಕ ಸಚಿವರು ಡಿಸಿಗೆ 500 ರೂ. ಹಣ ನೀಡಿದ್ರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ನಾಗಭೂಷಣ್ ಎಂಬುವವರು ಕೋರ್ಟ್‌ಗೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಕೋರ್ಟ್, ಗೃಹಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ಸೂಚನೆ ನೀಡಿತ್ತು.ಇದನ್ನೂ ಓದಿ: SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್



