ನವದೆಹಲಿ: ಕರ್ನಾಟಕದ (Karnataka) ಮಾವು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ತೋತಾಪುರಿ ತಳಿಯ ಮಾವನ್ನು(Totapuri Mangoe) ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (Market Intervention Scheme – MIS) ಅಡಿಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ.
ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಅವರು ಅವರು ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಮಹತ್ವದ ನಿರ್ಧಾರವನ್ನು ಪತ್ರದ ಮೂಲಕ ಪ್ರಕಟಿಸಿದ್ದಾರೆ.
ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯ ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ತೋತಾಪುರಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಬೆಲೆ ಕೊರತೆ ಪಾವತಿ ಯೋಜನೆ (PDPS) ಅಡಿಯಲ್ಲಿ ಬೆಂಬಲ ನೀಡುವಂತೆ ನಾನು ಮನವಿ ಮಾಡಿದ್ದೆ.
ನನ್ನ ಮನವಿಗೆ… pic.twitter.com/9li4RuZRUx
— Pralhad Joshi (@JoshiPralhad) June 25, 2026
ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಪುರಸ್ಕರಿಸಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು, ರಾಜ್ಯದಲ್ಲಿ ಒಟ್ಟು 1.30 ಲಕ್ಷ ಮೆಟ್ರಿಕ್ ಟನ್ ತೋತಾಪುರಿ ತಳಿಯ ಮಾವನ್ನು ಖರೀದಿಸಲು ಅನುಮತಿ ನೀಡಿದೆ. ಇದನ್ನೂ ಓದಿ: ಆರಂಭದಲ್ಲೇ ಮಾವಿನ ಹಣ್ಣಿನ ದರ ಕುಸಿತ – ಬೆಂಬಲ ಬೆಲೆಗೆ ಆಗ್ರಹಿಸಿ ಕೋಲಾರ ಬಂದ್
