ಬೆಂಗಳೂರು: ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಲೋಕಾಯುಕ್ತ ಎಸ್ಐಟಿ ದಾಖಲಿಸಿದ್ದ ಎರಡು ಪ್ರಕರಣದಿಂದ ಕೈಬಿಟ್ಟು ಜನಪ್ರತಿನಿಧಿಗಳ ವಿಶೇಷ ಕೊರ್ಟ್ ಆದೇಶ ಹೊರಡಿಸಿದೆ.
ಜನಾರ್ದನ ರೆಡ್ಡಿ, ಮೆಹಫೂಜ್ ಅಲಿ ಖಾನ್, ಹೊತ್ತೂರ್ ಅಬ್ದುಲ್ ವಹಾಬ್, ಹೊತ್ತೂರ್ ನೂರ್ ಅಹಮದ್, ಹೊತ್ತೂರ್ ಮೊಹಮ್ಮದ್ ಇಕ್ಬಾಲ್, ಟ್ರೈಡೆಂಟ್ ಮೈನಿಂಗ್ ಕಂಪನಿ ವಿರುದ್ಧದ ಪ್ರಕರಣವನ್ನು ಕೈಬಿಟ್ಟು ಕೋರ್ಟ್ ಆದೇಶಿಸಿದೆ.
ಬಳ್ಳಾರಿ ಉಸ್ತುವಾರಿ ಸಚಿವರಾಗಿ ಅಕ್ರಮ ಗಣಿಗಾರಿಕೆ ಪಿತೂರಿ ಆರೋಪ ಜನಾರ್ದನ ರೆಡ್ಡಿ ಮೇಲಿತ್ತು. ಸಿಆರ್‌ಪಿಸಿ 227 ಅಡಿಯಲ್ಲಿ ಪ್ರಕರಣದಿಂದ ಕೈಬಿಡುವಂತೆ ಆರೋಪಿಗಳು ಕೋರಿದ್ದರು.
