-ಆಪರೇಷನ್ ‘310’ ನಡೆಯುತ್ತಿರೋದು ಯಾಕೆ..?
-ಯಾರ ವಿರುದ್ಧ ಆಪರೇಷನ್ ‘310’
ಬೆಂಗಳೂರು: ವಿಧಾನಮಂಡಲ ಅಧಿವೇಶನದ ವೇಳೆಯಲ್ಲೇ ಜಾರಕಿಹೋಳಿ ಸಹೋದರರ ವಿರುದ್ಧ ಸೀಕ್ರೆಟ್ ಆಪರೇಷನ್ `310′ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಆಪರೇಷನ್ ಗೆ ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದ್ದು, ಈ ಮೂಲಕ ಸರ್ಕಾರ ಕೆಡವಿ, ನಮ್ಮ ದಾರಿ ನಾವು ನೋಡಿಕೊಳ್ಳುತ್ತೇವೆ ಎನ್ನುತ್ತಿದ್ದವರಿಗೆ ಬಿಗ್ ಶಾಕ್ ಎದುರಾಗಿದೆ.
Advertisement
ಸಚಿವ ರಮೇಶ್, ಮಾಜಿ ಸಚಿವರಾದ ಸತೀಶ್, ಬಾಲಚಂದ್ರ ಜಾರಕಿಹೋಳಿ ಇಲ್ಲಿ ಟಾರ್ಗೇಟ್ ಆಗಿದ್ದಾರೆ. ಟ್ರಿಪ್ ಹೋಗುವ ಮುನ್ನ ಆ ಮೂವರು ಮೇಲೆ ಎಲ್ಲಿ ಹೋಗ್ತಾರೆ..? ಎಲ್ಲಿ ಬರ್ತಾರೆ..? ಯಾರ ಜೊತೆ ಮಾತಾಡ್ತಾರೆ..? ಎಲ್ಲಿ ಸೇರ್ತಾರೆ..? ಕಣ್ಣಿಡಿ ಎಂದು ಸಿಎಂ, ಡಿಸಿಎಂಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೊಂದು ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.
Advertisement
Advertisement
ಸಿಎಂ ಸೂಚನೆಯಂತೆ ಗುಪ್ತಚರ ಇಲಾಖೆಯಿಂದ ಆಪರೇಷನ್ `310′ ಶುರುವಾಗಿದೆ. ನಿಗಾ ಇಡಲೆಂದೇ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ಸಂಕಮ್ ಹೋಟೆಲ್‍ನಲ್ಲಿ 310ನೇ ಕೊಠಡಿ ನೀಡಲಾಗಿದ್ದು, ಈ ಹೋಟೆಲ್ ಮೇಲೆ ಗುಪ್ತಚರ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಅಧಿಕಾರಿಗಳು ರೂಂ ಬಳಿ ಸುಳಿದಾಡುತ್ತಿರುವ, ತಪಾಸಣೆ ಮಾಡಿದ ಎಕ್ಸ್ ಕ್ಲೂಸಿವ್ ದೃಶ್ಯ ಈಗ ಪಬ್ಲಿಕ್ ಟಿವಿಗೆ ಲಭಿಸಿದೆ.
Advertisement
ಆಪರೇಷನ್ `310′ ಸುಳಿವು ಸಿಗುತ್ತಲೇ ಬೆಳಗಾವಿ ಸಾಹುಕಾರ ಫುಲ್ ಅಲರ್ಟ್ ಆಗಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಅವರು ಸರ್ಕಾರಿ ಕಾರ್, ಎಸ್ಕಾರ್ಟ್, ಪೈಲೆಟ್ ಎಲ್ಲಾ ಬಿಟ್ಟು ಓಡಾಡುತ್ತಿದ್ದಾರೆ. ನಡೆದಿದ್ದೇ ಹಾದಿ ಎನ್ನುವ ಬ್ರದರ್ಸ್ ಗೆ ಈಗ ತಮ್ಮ ನೆಲದಲ್ಲೆ `ಕದ್ದುಮುಚ್ಚಿ’ ಓಡಾಡಬೇಕಾದ ಸ್ಥಿತಿ ಎದುರಾಗಿದೆ. ಆಪರೇಷನ್ ಕಮಲದ ಭೀತಿ, ರೆಸಾರ್ಟ್ ರಾಜಕಾರಣದ ಆತಂಕದಿಂದ ಆಪರೇಷನ್ `310′ ಆರಂಭಿಸಿದ್ದಾರೆ. ಒಟ್ಟಿನಲ್ಲಿ ಸಿದ್ದು-ಸ್ವಾಮಿ-ಪರಮ ರಹಸ್ಯದ ಸ್ಕೆಚ್‍ಗೆ ಜಾರಕಿಹೊಳಿ ಬ್ರದರ್ಸ್ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv