ಬೆಂಗಳೂರು: ರಾಜ್ಯದ ಸಿನಿಮಾ ಪ್ರೇಕ್ಷಕರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸಿನಿಮಾ ಟಿಕೆಟ್ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್(ಉಪಕರ) ವಿಧಿಸಲು ಮಹತ್ವದ (Cinema Ticket Price Hike) ನಿರ್ಧಾರ ಕೈಗೊಂಡಿದೆ. ಈ ಹೊಸ ನಿಯಮವು ಸೆಪ್ಟೆಂಬರ್ 30 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.
2 ವರ್ಷಗಳ ಬಳಿಕ ಜಾರಿಯಾದ ಕಾಯ್ದೆ
ರಾಜ್ಯ ಸರ್ಕಾರವು 2024 ರಲ್ಲಿ ಮಂಡಿಸಿದ್ದ ‘ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ’ಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ.
ಈ ಮಸೂದೆಗೆ 2024ರ ಸೆಪ್ಟೆಂಬರ್ 23 ರಂದು ಕರ್ನಾಟಕದ ರಾಜ್ಯಪಾಲರು ಅಧಿಕೃತವಾಗಿ ಅಂಕಿತ ಹಾಕಿದ್ದರು. ಅದರ ಮರುದಿನವೇ, ಅಂದರೆ ಸೆಪ್ಟೆಂಬರ್ 24 ರಂದು ಸರ್ಕಾರದ ವಿಶೇಷ ರಾಜ್ಯಪತ್ರದಲ್ಲಿ (Gazette) ಇದನ್ನು ಪ್ರಕಟಿಸಲಾಗಿತ್ತು. ಇದೀಗ ಎರಡು ವರ್ಷಗಳ ಸುದೀರ್ಘ ಪ್ರಕ್ರಿಯೆಯ ಬಳಿಕ ಈ ಅಧಿನಿಯಮವನ್ನು ಜಾರಿಗೆ ತರಲಾಗುತ್ತಿದೆ. ಇದನ್ನೂ ಓದಿ: ತೆಲುಗು ನಟ ರಾಮ್ ಚರಣ್ ಪತ್ನಿ ಮಂತ್ರಾಲಯ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಉಪಾಸನಾ ಕೊನಿಡೇಲ
ಟಿಕೆಟ್ ದರ ಎಷ್ಟು ದುಬಾರಿಯಾಗುತ್ತೆ?
ಹೊಸ ನಿಯಮದ ಪ್ರಕಾರ, ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರಗಳಲ್ಲಿ ಸಿನಿಮಾ ನೋಡುವ ಗ್ರಾಹಕರು ಟಿಕೆಟ್ ದರದ ಜೊತೆಗೆ 2% ಸೆಸ್ ಪಾವತಿಸಬೇಕಾಗುತ್ತದೆ. ಉದಾಹರಣೆಗೆ, 200 ರೂಪಾಯಿ ಮುಖಬೆಲೆಯ ಟಿಕೆಟ್ಗೆ ಹೆಚ್ಚುವರಿಯಾಗಿ 4 ರೂಪಾಯಿ ಸೆಸ್ ಕಟ್ಟಬೇಕು.
ಸಿನಿಮಾ ಟಿಕೆಟ್ ಮೂಲಕ ಸಂಗ್ರಹವಾಗುವ ಈ ಸೆಸ್ ಹಣವನ್ನು ಕೇವಲ ಸಿನಿಮಾ ಕಾರ್ಮಿಕರ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಯೋಜನೆಗಳಿಗಾಗಿ ಮಾತ್ರ ಬಳಸಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.ಇದನ್ನೂ ಓದಿ: ಏಯ್ ಮುಚ್ಚೋ ಬಾಯಿ… ಆಸಿಯಾ ಆರ್ಭಟಕ್ಕೆ ಶಾಸ್ತ್ರಿ ಫುಲ್ ಸೈಲೆಂಟ್ – ದಂಗಾದ ದೊಡ್ಮನೆ!

