ಬೆಂಗಳೂರು: ವಿಶ್ವದಾದ್ಯಂತ ಬಿಡುಗಡೆ ಮುನ್ನವೇ ಸಾಕಷ್ಟು ಕುತೂಹಲ ಮೂಡಿಸಿರುವ ನಟ ಯಶ್ ಅಭಿನಯದ ಕೆ.ಜಿ.ಎಫ್ ಸಿನಿಮಾಗೆ ಸಂಕಷ್ಟ ಎದುರಾಗಿದ್ದು, ಚಿತ್ರ ಬಿಡುಗಡೆಗೆ ನಗರದ 10 ನೇ ಸಿಟಿ ಸಿವಿಲ್ ಕೋರ್ಟ್‍ನಿಂದ ಮಧ್ಯಂತರ ತಡೆ ನೀಡಿದೆ.
ಕೋರ್ಟ್ ಮಧ್ಯಂತರ ಆದೇಶದ ಅನ್ವಯ 2019 ಜನವರಿ 7 ನೇ ದಿನಾಂಕದವರೆಗೆ ಚಿತ್ರ ಬಿಡುಗಡೆಗೆ ತಡೆ ನೀಡಲಾಗಿದೆ. ವೆಂಕಟೇಶ್ ಎಂಬವರು ಕೆಜಿಎಫ್ ಸಿನಿಮಾ ವಿರುದ್ಧ ದಾವೆ ಹೂಡಿದ್ದು, ಕೆಜಿಎಫ್ ಸಿನಿಮಾ ರೌಡಿ ತಂಗಂ ಜೀವನಾಧರಿತ ಚಿತ್ರ ಎಂದು ಆರೋಪ ಮಾಡಿದ್ದಾರೆ. ತಾವು ತಂಗಂ ಜೀವನಾಧರಿತ ಸಿನಿಮಾ ಮಾಡಲು ಹಕ್ಕು ಪಡೆದಿದ್ದು, ಅದ್ದರಿಂದ ಸಿನಿಮಾಗೆ ಬಿಡುಗಡೆಗೆ ತಡೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
Advertisement
Advertisement
ಮತ್ತೊಂದೆಡೆ ಸಿನಿಮಾ ಟೈಟಲ್ ಬದಲಿಸುವಂತೆ ರತನ್ ಹಾಗೂ ಯೋಗಿಶ್ ಎಂಬವರು ಸೆಷನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಕೆಜಿಎಪ್ ಚಿನ್ನದ ಗಣಿ, ಅದನ್ನು ರಕ್ತಪಾತದ ಮೂಲಕ ತೋರಿಸಲು ಹೊರಟ್ಟಿದ್ದಾರೆ. ಇದರಿಂದ ಮುಂದಿನ ಪೀಳಿಗೆಗೆ ಕೆ.ಜಿ.ಎಫ್ ಬಗ್ಗೆ ಕೆಟ್ಟ ಸಂದೇಶ ರವಾನೆಯಾಗುತ್ತೆ. ಸಿನಿಮಾ ಬಿಡುಗಡೆಯಾಗ ಬೇಕಾದರೆ ಕೆಜಿಎಫ್ ಟೈಟಲ್ ಬದಲಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
Advertisement
ಸಿನಿಮಾ ಟೈಟಲ್ ಬದಲಾವಣೆ ಮಾಡುವ ವರೆಗೂ ಬಿಡುಗಡೆಗೆ ಅವಕಾಶ ನೀಡಬಾರದು ಎಂಬುದು ಅರ್ಜಿದಾರರ ಮನವಿಯಾಗಿದೆ. ವಕೀಲ ಲೋಹಿತ್ ಅವರ ಮೂಲಕ ನಾಯಾಲಯಲ್ಲಿ ಅರ್ಜಿ ಸಲ್ಲಿಸಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv