ಮಂಡ್ಯ: ಶಿಕ್ಷಕಿಯನ್ನು (Teacher) ಕೊಲೆಗೈದು ಬೆಟ್ಟದ ತಪ್ಪಲಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪರಿಚಯಸ್ಥ ಹುಡುಗನಿಂದಲೇ ಶಿಕ್ಷಕಿ ಕೊಲೆಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಮಂಡ್ಯ (Mandya) ಜಿಲ್ಲೆ ಪಾಂಡವಪುರ (Pandavapura) ತಾಲೂಕಿನ ಮೇಲುಕೋಟೆಯಲ್ಲಿ (Melukote) ಶಿಕ್ಷಕಿ ದೀಪಿಕಾ (28) ಮೃತದೇಹ ಕೊಲೆ ಮಾಡಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈಕೆಯ ಕೊಲೆಯ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿತ್ತು. ಇದೀಗ ಸ್ವಗ್ರಾಮದ ಯುವಕನ ವಿರುದ್ಧ ಮೃತ ದೀಪಿಕಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ದೀಪಿಕಾ ನಾಪತ್ತೆಗೂ ಮುನ್ನ ನಿತೀಶ್ (22) ಎಂಬಾತ ಕೊನೆಯ ಕರೆ ಮಾಡಿದ್ದ. ದೀಪಿಕಾ ಮೃತದೇಹ ಸಿಗುತ್ತಿದ್ದಂತೆ ಯುವಕ ಗ್ರಾಮದಿಂದ ನಾಪತ್ತೆಯಾಗಿದ್ದಾನೆ. ಇದನ್ನೂ ಓದಿ: ಬಂಡೆ ಬ್ಲಾಸ್ಟ್ ಮಾಡುವ ವೇಳೆ ಅವಘಡ – ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು
Advertisement
Advertisement
ನಿತೀಶ್ ಅಕ್ಕ ಅಕ್ಕ ಎನ್ನುತ್ತಲೇ ದೀಪಿಕಾ ಜೊತೆ ಸ್ನೇಹ ಬೆಳೆಸಿದ್ದ. ಒಂದೇ ಊರಿನವನಾದ್ದರಿಂದ ದೀಪಿಕಾ ಆತನ ಜೊತೆ ಸಲುಗೆಯಿಂದಲೇ ಮಾತನಾಡುತ್ತಿದ್ದಳು. ನಿತೀಶ್‌ನಿಂದಲೇ ದೀಪಿಕಾ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೂ ಮುನ್ನ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಮತ್ತು ನಿತೀಶ್ ಜಗಳವಾಡುತ್ತಿದ್ದ ವೀಡಿಯೋ ಸೆರೆಯಾಗಿದೆ. 13 ಸೆಕೆಂಡ್‌ಗಳ ವಿಡಿಯೋ ರೆಕಾರ್ಡ್ ಮಾಡಿದ್ದ ಪ್ರವಾಸಿಗರು ಅದನ್ನು ಪೊಲೀಸರಿಗೆ ನೀಡಿದ್ದಾರೆ. ನಾಪತ್ತೆ ದೂರು ನೀಡಿದ್ರು, ಜಗಳ ವಿಡಿಯೋ ಸಿಕ್ಕಿದ್ರು ಗಂಭೀರವಾಗಿ ಪರಿಗಣಿಸದೆ ಪೊಲೀಸರ ನಿರ್ಲಕ್ಷ್ಯ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಇದನ್ನೂ ಓದಿ: ಅತ್ತಿಗೆ ಮೇಲೆ ಗ್ಯಾಂಗ್‌ರೇಪ್ ಮಾಡಿ ಕೊಲೆಗೈದ ಐವರು ಮೈದುನರು – ದುಬೈನಲ್ಲಿರೋ ಮಹಿಳೆಯ ಪತಿಯೇ ಮಾಸ್ಟರ್‌ಮೈಂಡ್
Advertisement
Advertisement
ಬಳಿಕ ಬೆಟ್ಟದ ತಪ್ಪಲಿನಲ್ಲೇ ದೀಪಿಕಾಳ ಡಿಯೋ ಸ್ಕೂಟರ್ ಪತ್ತೆಯಾಗಿದೆ. ಸ್ಕೂಟರ್ ಪತ್ತೆಯಾದ ಸ್ಥಳದ ಸುತ್ತಮುತ್ತ ದೀಪಿಕಾಳಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ ವೇಳೆ ಹೂತಿದ್ದ ಸ್ಥಿತಿಯಲ್ಲಿ ಮೃತದೇಹ ಕಣ್ಣಿಗೆ ಬಿದ್ದಿದೆ. ತಕ್ಷಣವೇ ಕುಟುಂಬಸ್ಥರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಹಶಿಲ್ದಾರ್ ಸಮ್ಮುಖದಲ್ಲಿ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನು ಆರೋಪಿ ಪತ್ತೆಗೆ 2 ವಿಶೇಷ ತಂಡ ರಚನೆ ಮಾಡಲಾಗಿದೆ. ಈ ಕುರಿತು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ವೇದಿಕೆಯಲ್ಲೇ ಕುಸಿದು ಬಿದ್ದು ಹನುಮ ವೇಷಧಾರಿ ನಿಧನ
ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಸಂಜೆಯಾದರೂ ಮಗಳು ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ತಂದೆ ವೆಂಕಟೇಶ್ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಸಹ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಇದನ್ನೂ ಓದಿ: ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!