ವಿಜಯಪುರ: ವಿಜಯಪುರ ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೇಕನೂರ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಂಧಿತರಿಂದ ರೇಷ್ಮಾಳ ಮತ್ತೊಂದು ಮುಖವಾಡ ಹೊರಬಿದ್ದಿದೆ.
ರೇಷ್ಮಾ ಪಡೇಕನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಪೊಲೀಸರು ಆರೋಪಿ ಮಹಾರಾಷ್ಟ್ರದ ಎಂಐಎಂ ಮುಖಂಡ, ಸೊಲ್ಲಾಪುರ ಮಹಾನಗರ ಪಾಲಿಕೆ ಕಾರ್ಪೊರೇಟರ್ ತೌಫಿಕ್ ಶೇಖ್ ಹಾಗೂ ಮತ್ತೋರ್ವ ಆರೋಪಿ ಆತನ ಕಾರು ಚಾಲಕ ಇಜಾಜ್ ಬಿರಾದಾರನನ್ನ ಬಂಧಿಸಿದ್ದರು.
Advertisement
Advertisement
ಮೃತ ರೇಷ್ಮಾ ಪಡೇಕನೂರ ಎಂಐಎಂ ಮುಖಂಡ ತೌಫಿಕ್‍ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಅಷ್ಟೇ ಅಲ್ಲದೇ ಹಣ ಹಾಗೂ ಆಸ್ತಿಗಾಗಿ ತೌಫಿಕ್‍ನನ್ನು ಬ್ಲಾಕ್‍ಮೇಲ್ ಮಾಡುತ್ತಿದ್ದು, ತೌಫಿಕ್‍ನ ಎಂಟು ಎಕರೆ ಆಸ್ತಿ ತನ್ನ ಹೆಸರಿಗೆ ಬರೆಯುವಂತೆ ಬ್ಲಾಕ್‍ಮೇಲ್ ಮಾಡಿದ್ದಳು ಎಂದು ಬಂಧಿತರು ಬಾಯಿಟ್ಟಿದ್ದಾರೆ.
Advertisement
ಹಣ ಕೊಡುವಂತೆ ಪೀಡಿಸುತ್ತಿದ್ದಳಂತೆ. ಇದರಿಂದ ಬೇಸತ್ತು ಪ್ಲಾನ್ ಮಾಡಿ ಕೊಲೆ ಮಾಡಿದ್ದಾಗಿ ತೌಫಿಕ್ ಶೇಖ್ ತನಿಖೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆಂದು ವಿಜಯಪುರ ಎಸ್‍ಪಿ ಪ್ರಕಾಶ್ ನಿಕಮ್ ಮಾಧ್ಯಮಗಳಿಗೆ ಸ್ಪಷ್ಟ ಪಡಿಸಿದ್ದಾರೆ.
Advertisement
ಏನಿದು ಪ್ರಕರಣ?
ಜೆಡಿಎಸ್‍ನ ಮಾಜಿ ಜಿಲ್ಲಾಧ್ಯಕ್ಷೆ ಹಾಗೂ ಹಾಲಿ ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೇಕನೂರ ಶವ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕೋಲ್ಹಾರ ಬಳಿಯ ಕೃಷ್ಣಾ ನದಿಯಲ್ಲಿ ಮೇ 17 ರಂದು ಪತ್ತೆಯಾಗಿತ್ತು. ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ನಿಂದ ದೇವರಹಿಪ್ಪರಗಿ ಮತಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅಲ್ಲದೆ 2013ರಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್ ನಿಂದ ರೇಷ್ಮಾ ಪಡೇಕನೂರ ಸ್ಪರ್ಧಿಸಿ ಸೋಲು ಕಂಡಿದ್ದರು. ಕೋಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.