ಬೆಂಗಳೂರು: ಬಿಗ್ ಬಾಸ್ ಸೀಸನ್-3 ಖ್ಯಾತಿಯ ಕ್ರಿಕೆಟರ್ ಎನ್.ಸಿ ಅಯ್ಯಪ್ಪ ಅವರು ತಮ್ಮ ಪ್ರೇಯಸಿ ನಟಿ ಅನು ಪೂವಮ್ಮ ಜೊತೆ ಸಪ್ತಪದಿ ತುಳಿಯಲು ಸಿದ್ಧರಾಗಿದ್ದಾರೆ.
ಅಯ್ಯಪ್ಪ ಮತ್ತು ಅನು ಪೂವಮ್ಮ ಅವರ ಮದುವೆಯನ್ನು ಮುಂದಿನ ತಿಂಗಳು ಅಂದರೆ ಜನವರಿ 19 ಮತ್ತು 20ಕ್ಕೆ ಕುಟುಂಬಸ್ಥರು ನಿಶ್ಚಯ ಮಾಡಿದ್ದಾರೆ. ನಟಿ ಅನು ಪೂವಮ್ಮ ಮೂಲತಃ ಕೊಡಗಿನರಾಗಿದ್ದು, ಕೊಡವ ಸಂಪ್ರದಾಯದಂತೆ ಮದುವೆ ನೆರವೇರಲಿದೆ ಎಂದು ತಿಳಿದು ಬಂದಿದೆ.
ಅಯ್ಯಪ್ಪ ಮತ್ತು ಅನು ಪೂವಮ್ಮ ಅವರು ಇದೇ ವರ್ಷ ಮೇ ತಿಂಗಳಿನಲ್ಲಿ ಬೆಂಗಳೂರಿನ ವಸಂತ ನಗರದಲ್ಲಿರುವ ಕೊಡವ ಸಮಾಜದಲ್ಲಿ ಕೊಡವ ಸಂಪ್ರದಾಯದಂತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇವರಿಬ್ಬರು ಪ್ರೀತಿಸಿ ಮದುವೆಯಾಗುತ್ತಿದ್ದಾರೆ.
2016ರಲ್ಲಿ ಅಯ್ಯಪ್ಪ ಮತ್ತು ಅನು ಇಬ್ಬರು ಭೇಟಿಯಾಗಿದ್ದು, ಪರಿಚಯವಾಗಿ ಸ್ನೇಹವಾಗಿತ್ತು. ಬಳಿಕ ಸ್ನೇಹ ಪ್ರೀತಿಯಾಗಿ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ಈ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದರು. ಎರಡು ಕುಟುಂಬದವರು ಕೂಡ ಇವರಿಬ್ಬರ ಪ್ರೀತಿಗೆ ಒಪ್ಪಿಗೆ ಸೂಚಿಸಿದ್ದರು.
ಅನು ಪೂವಮ್ಮ ಕನ್ನಡದ ಕರ್ವ, ಕಥಾವಿಚಿತ್ರ, ಲೈಫ್ ಸೂಪರ್, ಪಾನಿಪೂರಿ ಚಿತ್ರಗಳಲ್ಲಿ ನಟಿಸಿದ್ದಾರೆ. ಸದ್ಯ ಈಗ ಅವರು ಖಾಸಗಿ ವಾಹಿನಿಯ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅಯ್ಯಪ್ಪ ಬಿಗ್ಬಾಸ್ ಸೀಸಸ್ 3 ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv